Friday, September 20, 2024
Friday, September 20, 2024

ರಸ್ತೆ ಸುರಕ್ಷತೆಯ ನಿಯಮಗಳನ್ನು ತಪ್ಪದೇ ಪಾಲಿಸಿ

ರಸ್ತೆ ಸುರಕ್ಷತೆಯ ನಿಯಮಗಳನ್ನು ತಪ್ಪದೇ ಪಾಲಿಸಿ

Date:

ಉಡುಪಿ, ಫೆ.20: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ.ಕೃಷ್ಣ ಪ್ರಸಾದ್ ಹೇಳಿದರು. ಅವರು ನಗರದ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಜಿಲಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತೆಯ ಸಮಾರೋಪವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ, ಅಪಘಾತದಲ್ಲಿ ಮರಣ ಹಾಗೂ ತ್ರೀವತರ ಹಾನಿ ಉಂಟಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದು ನಾವು ಕಾಣುತ್ತಿದ್ದೇವೆ ರಸ್ತೆ ಸುರಕ್ಷತೆ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸುವುದರೊಂದಿಗೆ ರಸ್ತೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ.ಪಿ.ರವಿಶಂಕರ್, ಚಾಲಕರು ರಸ್ತೆಗಳಲ್ಲಿ ಎಡಬದಿಯಲ್ಲಿ ಚಲಿಸಬೇಕು. ವಿರುದ್ಧ ದಿಕ್ಕಿನಲ್ಲಿ ಚಲಿಸಬಾರದು. ಚಾಲನೆಯಲ್ಲಿ ಮೊಬೈಲ್ ಬಳಸಬಾರದು. ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಅನುಸರಿಸಿ ಸುರಕ್ಷಿತ ಚಾಲನೆ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ವಿಜಯೇಂದ್ರ, ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಜಾಸ್ತಿಯಾಗಿದ್ದು ನಿಯಮಿತವಾಗಿ ವಾಹನಗಳನ್ನು ತಪಾಸಣೆ ಮಾಡಿಸಿ ಸುಸ್ಥಿತಿಯಲ್ಲಿಟ್ಟುಕೊಂಡು, ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸುವಂತೆ ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಕುರಿತು ಕಿರು ಚಿತ್ರವನ್ನು ಪದರ್ಶಿಸಿಲಾಯಿತು.

ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕೈಪಿಡಿಯನ್ನು ಮತ್ತು ರಸ್ತೆ ಸುರಕ್ಷತೆ ಕುರಿತು ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಕೃಷ್ಣ ಪ್ರಸಾದ್ ನೇತ್ರಾಲಯದವರಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಹಿರಿಯ ಪತ್ರಕರ್ತ ಭಾಸ್ಕರ್ ರಾವ್ ಪೇತ್ರಿ, ಕಛೇರಿಯ ಅಧೀಕ್ಷಕ ಪಮಿತ, ಡಾ.ಅತುಲ್, ಡಾ.ವಿಜೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಾದೇಶಿಕ ಸಾರಿಗೆ ಕಛೇರಿಯ ಶಾಂತರಾಜು ಸ್ವಾಗತಿಸಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಸಂತೋಷ್ ಶೆಟ್ಟಿ ನಿರೂಪಿಸಿ, ಸುಧಾಂಶು ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!