Friday, November 6, 2026
Friday, November 6, 2026

ಭಜನೆಯಿಂದ ಹಿಂದೂ ಸಂಸ್ಕೃತಿ, ಸಂಸ್ಕಾರದ ಉಳಿವು ಸಾಧ್ಯ: ಬಸ್ರೂರು ಅಪ್ಪಣ್ಣ ಹೆಗ್ಡೆ

ಭಜನೆಯಿಂದ ಹಿಂದೂ ಸಂಸ್ಕೃತಿ, ಸಂಸ್ಕಾರದ ಉಳಿವು ಸಾಧ್ಯ: ಬಸ್ರೂರು ಅಪ್ಪಣ್ಣ ಹೆಗ್ಡೆ

Date:

ಕೋಟ: ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಶೈನ್ ಈವೆಂಟ್ಸ್ ಸಂಸ್ಥೆ ಆಶ್ರಯದಲ್ಲಿ ಶ್ರೀರಾಮ ಭಜನಾ ಸ್ಪರ್ಧೆ ಕಾರ್ಯಕ್ರಮ ಜರಗಿತು. ಬಸ್ರೂರು ಮಹಾಲಿಂಗೇಶ್ವರ ದೇಗುಲದ ಆಡಳಿತ ಮೊಕ್ತೇಸರ ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೂ ಧಾರ್ಮಿಕ ಸಂಸ್ಕೃತಿಯಲ್ಲಿ ಭಜನೆಗೆ ವಿಶೇಷ ಮಹತ್ವವಿದೆ. ಭಜನೆ ಮೂಲಕ ಸಂಸ್ಕಾರ, ಸಂಸ್ಕೃತಿಗಳು ಉದ್ವೀಪನಗೊಳ್ಳುತ್ತದೆ. ಪ್ರತಿ ಮನೆಯಲ್ಲೂ ಶಾಂತಿ-ನೆಮ್ಮದಿ ಹಾಗೂ ಧಾರ್ಮಿಕ ವಾತಾವರಣ ನೆಲೆಗೊಳ್ಳುತ್ತದೆ ಎಂದರು.

ವಡ್ಡರ್ಸೆ ಮಹಾಲಿಂಗೇಶ್ವರ ದೇಗುಲದ ಆಡಳಿತ ಮೊಕ್ತೇಸರ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಇಂತಹ ಕಾರ್ಯಕ್ರಮ ಸಂಘಟನೆಗೊಳ್ಳುತ್ತಿರುವುದು ಅತ್ಯಂತ ಖುಷಿಯ ಸಂಗತಿಯಾಗಿದೆ. ಯುವ ಮನಸ್ಸುಗಳಲ್ಲಿ ಭಜನಾ ಚಿಂತನೆ ಪುನಃ ರೂಪುಗೊಳ್ಳಲಿ ಎಂದರು. ಕಾರ್ಯಕ್ರಮದ ಸಂಯೋಜಕ ಸುಶಾಂತ್ ಶೆಟ್ಟಿ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಭಜಕರಾದ ಹವರಾಲು ಭುಜಂಗ ಶೆಟ್ಟಿ, ಬಾಬು ಪೂಜಾರಿ ಅಚ್ಲಾಡಿ ಮುಲ್ಲಿಬೆಟ್ಟು, ವಡ್ಡರ್ಸೆ ರಾಮಕೃಷ್ಣ ಉಡುಪ ಅವರನ್ನು ಸಮ್ಮಾನಿಸಲಾಯಿತು. ವಡ್ಡರ್ಸೆ ಗ್ರಾ.ಪಂ.ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಸುಲೋಚನ ಗಣೇಶ್, ಉದ್ಯಮಿ ಪ್ರಮೋದ್ ಶೆಟ್ಟಿ, ಭಜನಾ ಪರಿಷತ್ ಕುಂದಾಪುರ ಘಟಕದ ಅಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಸನ್ಶೈನ್ ಗೆಳೆಯರ ಬಳಗದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಉಪಸ್ಥಿತರಿದ್ದರು. ಯುವ ಸಂಘಟಕ ಅಭಿಜಿತ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಲ್ಕು ರಾಷ್ಟ್ರಗಳ ನೌಕಾಪಡೆಗಳೊಂದಿಗೆ ಐಎನ್ಎಸ್ ಸಹ್ಯಾದ್ರಿ

ನವದೆಹಲಿ, ನ.5: ಭಾರತೀಯ ನೌಕಾಪಡೆಯ ಸ್ಥಳೀಯ ಮಾರ್ಗದರ್ಶಿ ಕ್ಷಿಪಣಿ ಸ್ಟೆಲ್ತ್ ಫ್ರಿಗೇಟ್,...

ಗಯಾನಾದಲ್ಲಿ ರಸ್ತೆ, ಆರೋಗ್ಯ ಮತ್ತು ರಕ್ಷಣಾ ಯೋಜನೆಗಳಿಗಾಗಿ 500 ಮಿಲಿಯನ್ ಡಾಲರ್ ಸಾಲ ಸೌಲಭ್ಯವನ್ನು ಘೋಷಿಸಿದ ಭಾರತ

ನವದೆಹಲಿ, ನ.5: ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್....

ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆ

ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ...

ತೆಂಗಿನ ತೋಟಗಳ ಪುನಶ್ಚೇತನ ಕಾರ್ಯಕ್ರಮದಡಿ ಸಹಾಯಧನ

ಉಡುಪಿ, ನ.5: ಉಡುಪಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುತ್ಪಾದಕ...
error: Content is protected !!