Tuesday, November 26, 2024
Tuesday, November 26, 2024

ಗಂಗೊಳ್ಳಿ ಅಗ್ನಿ ಅವಘಡ- 1.75 ಕೋಟಿ ಪರಿಹಾರ ಮಂಜೂರು: ಯಶ್ಪಾಲ್ ಸುವರ್ಣ

ಗಂಗೊಳ್ಳಿ ಅಗ್ನಿ ಅವಘಡ- 1.75 ಕೋಟಿ ಪರಿಹಾರ ಮಂಜೂರು: ಯಶ್ಪಾಲ್ ಸುವರ್ಣ

Date:

ಬೆಂಗಳೂರು, ಫೆ.20: 2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಮೀನುಗಾರಿಕೆ ಸಚಿವರಾದ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು.

ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದರು.

ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!