Tuesday, November 26, 2024
Tuesday, November 26, 2024

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳಿಗೆ ಮೇಕ್-ಎ-ವಿಶ್ ಫೌಂಡೇಶನ್‌ನಿಂದ ಉಡುಗೊರೆಗಳು

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳಿಗೆ ಮೇಕ್-ಎ-ವಿಶ್ ಫೌಂಡೇಶನ್‌ನಿಂದ ಉಡುಗೊರೆಗಳು

Date:

ಮಣಿಪಾಲ, ಫೆ.21: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಕ್-ಎ-ವಿಶ್ ಫೌಂಡೇಶನ್ ವತಿಯಿಂದ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 25 ಮಕ್ಕಳಿಗೆ ಸುಮಾರು 7 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ನೀಡಲಾಯಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು. ಅವರಿಬ್ಬರೂ 25 ಅರ್ಹ ಫಲಾನುಭವಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಉಡುಗೊರೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮೇಕ್-ಎ-ವಿಶ್ ಫೌಂಡೇಶನ್‌ನ ಎ ಬಿ ಬೋಸ್ಕೋ ಅವರು ಮಾತನಾಡಿ, ಪ್ರತಿಷ್ಠಾನದ ಧ್ಯೇಯೋದ್ದೇಶಗಳು ಮತ್ತು ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ರಕ್ತಶಾಸ್ರ ಮತ್ತು ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ವಾಸುದೇವ ಭಟ್ ಮತ್ತು ಅವರ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!