Monday, February 24, 2025
Monday, February 24, 2025

ಪೊಲೀಸರ ತ್ಯಾಗ, ಬಲಿದಾನ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಪೊಲೀಸರ ತ್ಯಾಗ, ಬಲಿದಾನ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ದೇಶ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಗಾಗಿ ತಮ್ಮ ಕರ್ತವ್ಯದ ಸಮಯದಲ್ಲಿ ಪೊಲೀಸರು ಮಾಡುವ ತ್ಯಾಗ ಹಾಗೂ ಬಲಿದಾನ ಸದಾ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಇಂದು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಚಂದು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಪೋಲಿಸ್ ಹುತಾತ್ಮ ಸ್ಮಾರಕಕ್ಕೆ ಗೌರವವಂದನೆ ಸಲ್ಲಿಸಿ ಮಾತನಾಡಿದರು.

ಯಾವುದೇ ಅಸಾಧಾರಣಾ ಸನ್ನಿವೇಶದಲ್ಲೂ ಸಹ ವಿಶೇಷ ಸೇವೆ ಸಲ್ಲಿಸುವ ಪೊಲೀಸರು, ತುರ್ತು ಪರಿಸ್ಥಿತಿ, ಕ್ಲಿಷ್ಟಕರ ಪರಿಸ್ಥಿತಿ, ಪ್ರಾಕೃತಿಕ ವಿಕೋಪ ಪರಿಸ್ಥಿತಿಯಲ್ಲೂ ಸಹ ಎದೆಗುಂದದೇ ಕಾರ್ಯನಿರ್ವಹಿಸುತ್ತಾರೆ. ಸಮಾಜದಲ್ಲಿ ಜನತೆ ಶಾಂತಿ ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವುದೇ ಕಾರಣ. ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ಎಸ್ಪಿ ವಿಷ್ಣುವರ್ಧನ್ ಪೊಲೀಸ್ ಹುತಾತ್ಮರ ದಿನಾಚರಣೆಯ ಮಹತ್ವದ ಬಗ್ಗೆ ಹಾಗೂ 2020 ಸೆಪ್ಟಂಬರ್ 1 ರಿಂದ 2021 ಆಗಸ್ಟ್ 31 ರ ವರೆಗೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾದ ಕರ್ನಾಟಕದ 16 ಮಂದಿ ಸೇರಿದಂತೆ ದೇಶದ ಒಟ್ಟು 377 ಪೊಲೀಸರ ನಾಮಸ್ಮರಣೆ ಮಾಡಿದರು.

ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗುಂಡು ಹಾರಿಸಲಾಯಿತು, ಎರಡು ನಿಮಿಷಗಳ ಮೌನಾಚರಣೆ ನಡೆಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು.

ಪ್ರೋಬೆಷನರ್ ಆರ್.ಎಸ್.ಐ ಪುನೀತ್ ಕುಮಾರ್ ಪರೇಡ್ ನೇತೃತ್ವ ವಹಿಸಿದ್ದರು. ಕರಾವಳಿ ಕಾವಲು ಪೊಲೀಸ್ ನ ಎಸ್.ಐ. ಬಿ.ಮನಮೋಹನ್ ರಾವ್ ನಿರೂಪಿಸಿದರು.

ಐಪಿಎಸ್ ತರಬೇತಿ ನೆನೆಪಿಸಿಕೊಂಡ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ತಾವು ಐಪಿಎಸ್ ತರಬೇತಿಯಲ್ಲಿದ್ದಾಗ ಅಕಾಡೆಮಿಯಲ್ಲಿ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮೊದಲು ಸಮಾಜಕ್ಕಾಗಿ ಕರ್ತವ್ಯ ನಿರ್ವಹಿಸಬೇಕು. ಎರಡನೇಯದಾಗಿ ತಮ್ಮ ಜೊತೆಯಲ್ಲಿರುವ ಸಹೋದ್ಯೋಗಿಗಳ ರಕ್ಷಣೆಗೆ ಮತ್ತು ಅಂತಿಮವಾಗಿ ತನ್ನ ಪ್ರಾಣದ ಕುರಿತು ಯೋಚಿಸಬೇಕು ಎಂದು ತಿಳಿಸಿದ್ದರು. ಪೊಲೀಸರು ಎಂದೆಂದಿಗೂ ಅದೇ ರೀತಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!