Monday, November 25, 2024
Monday, November 25, 2024

ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿ ಮೈಗೂಡಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿ ಮೈಗೂಡಿಸಿಕೊಳ್ಳಬೇಕು

Date:

ಉಡುಪಿ, ಫೆ. 23: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಸರಕಾರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ಜಂಕ್ ಫುಡ್ ನಂತಹ ಸತ್ವರಹಿತ ಆಹಾರದ ದಾಸರಾಗದೇ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿಯವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಗಿ ಹೆಲ್ತ್ ಮಿಕ್ಸ್ ಹಾಲಿನ ವಿತರಣೆಯ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಕಳೆದು ಹೋದ ಸಮಯ ಮತ್ತೆ ಬರಲಾರದು. ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೇವಲ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದತ್ತ ಮಾತ್ರ ಆಕರ್ಷಿತರಾಗದೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಒಲವು ತೋರಬೇಕು. ಸರಕಾರ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಾ ಈಗಿನಿಂದಲೇ ದೃಢ ನಿರ್ಧಾರ ಮಾಡಿಕೊಂಡು ಸಾಧಕರಾಗುವಂತೆ ಕರೆ ನೀಡಿದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ವಿನೋದಾ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ ಕೆ., ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗೋವಿಂದ ಮಡಿವಾಳ, ನಗರಸಭಾ ಪೌರಾಯುಕ್ತ ರಾಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಪ್ರಾಂಶುಪಾಲೆ ಡಾ. ಸುಮಾ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಅಕ್ಷರ ದಾಸೋಹ- ಪಿ ಎಮ್ ಪೋಷಣ್ ನ ಶಿಕ್ಷಣಾಧಿಕಾರಿ ರುದ್ರೇಶ್ ಟಿ. ಆರ್ ಪ್ರಸ್ತಾವಿಕವಾಅಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿ, ತಾಲ್ಲೂಕು ಅಕ್ಷರದಾಸೋಹ ಅಧಿಕಾರಿ ವಿವೇಕ ಗಾಂವ್ಕರ್ ವಂದಿಸಿದರು. ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!