Monday, January 20, 2025
Monday, January 20, 2025

ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸುವ ಅನುದಾನದಲ್ಲಿ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ

ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸುವ ಅನುದಾನದಲ್ಲಿ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ

Date:

ಉಡುಪಿ, ಫೆ.23: ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶ್ರೇಯೋಭಿವೃದ್ಧಿಗೆ ಮಿಸಲಿರಿಸಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಕಾಲಾವಧಿಯಲ್ಲಿ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿ ಯ ಜಿಲ್ಲಾಧಿಕಾರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿತರಕ್ಷಣೆ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ, ಅರ್ಹ ಫಲಾನುಭವಿಗಳು ಈ ಯೋಜನೆಗಳ ಲಾಭ ಪಡೆಯುವಂತೆ ಮಾಡುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್‌ಚ್ಛಕ್ತಿ ಸೌಲಭ್ಯ, ರಸ್ತೆ, ಚರಂಡಿ, ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಸಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ ಅವರು, ಇಂದಿನ ಕುಂದುಕೊರತೆ ಸಭೆಯಲ್ಲಿ ಬಂದಿರುವ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆದ್ಯತೆಯ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು. ಸಭೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಯ ಮುಖಂಡರುಗಳು, ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಮೀಸಲಿರಿಸಿದ ಅನುದಾನವನ್ನು ದುರ್ಬಳಕೆ ಆಗಿರುವ ಬಗ್ಗೆ, ಡಿಸಿ ಮನ್ನಾ ಜಾಗವನ್ನು ಮಂಜೂರು ಮಾಡಲು, ನಿವೇಶನ ಹಂಚಿಕೆ ಮಾಡಲು, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನಿಗಧಿತ ಪ್ರಮಾಣದ ಆಹಾರ ಪದಾರ್ಥಗಳು ವಿತರಣೆ ಆಗುತ್ತಿಲ್ಲ, ಅಂಬೇಡ್ಕರ್ ಭವನಗಳ ನಿರ್ಮಾಣ ಶೀಘ್ರದಲ್ಲಿಯೇ ಕೈಗೊಳ್ಳಬೇಕು, ನಮೂನೆ 50, 53 ಅಡಿಯಲ್ಲಿ ಅರ್ಜಿ ಸಲ್ಲಿಸಿದ ಭೂಮಿಯನ್ನು ಹಂಚಿಕೆ ಮಾಡಬೇಕು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಬೇಕು, ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್‌ಗಳನ್ನು ಕೊರೆಯುವುದು ಹಾಗೂ ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಶೀಘ್ರದಲ್ಲಿಯೇ ಆಗಬೇಕು ಹಾಗೂ ಮತ್ತಿತರ ಅಹವಾಲುಗಳನ್ನು ಸಮಿತಿಯ ಮುಂದಿಟ್ಟರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಡಿವೈಎಸ್‌ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ ಎಸ್, ಡಿಎಫ್‌ಓ ಗಣಪತಿ, ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಪ್ರಿಯಂವದ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!