Sunday, January 19, 2025
Sunday, January 19, 2025

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮ ವಹಿಸಿ

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮ ವಹಿಸಿ

Date:

ಉಡುಪಿ, ಫೆ.27: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜೆ.ಜೆ.ಎಂ ಯೋಜನೆಯಡಿ ಉಳಿದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಶೀಘ್ರವಾಗಿ ಪೂರ್ಣಗೊಳೀಸುವುದರ ಜೊತೆಗೆ ಕುಡಿಯುವ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು. ಉಡುಪಿ ನಗರಕ್ಕೆ ವರಾಹಿ ಯೋಜನೆಯ ಕುಡಿಯುವ ನೀರಿನ ಕಾಮಗಾರಿಯನ್ನು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆದು ಹಾಗೂ ಕೆಲವೊಂದು ಭಾಗದಲ್ಲಿ ತಾತ್ಕಾಲಿಕ ಕಾಮಗಾರಿಯನ್ನು ಕೈಗೊಂಡು ನಗರಕ್ಕೆ ನೀರು ಒದಗಿಸಬೇಕೆಂದರು ಜಿಲ್ಲೆಯಲ್ಲಿ ಮುಂದಿನ 19 ವಾರಗಳಿಗಾಗುವಷ್ಟು ಜಾನುವಾರುಗಳ ಮೇವು ಲಭ್ಯವಿದೆ. ರೈತರಿಗೆ ಹೆಚ್ಚಿನ ಮೇವಿನ ಕಿಟ್‌ಗಳನ್ನು ವಿತರಿಸುವುದರೊಂದಿಗೆ ಮೇವು ಬೆಳೆಯಲು ಪ್ರೋತ್ಸಾಹಿಸಬೇಕು ಎಂದ ಅವರು, ಸಾಧ್ಯವಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿಯೂ ಮೇವು ಬೆಳೆಯಲು ಮುಂದಾಗಬೇಕು ಎಂದರು.

ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಅಡಿಕೆ ಹಳದಿ ರೋಗ ನಿಯಂತ್ರಣ, ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯ ಅನುಷ್ಠಾನ ಮತ್ತಿತರ ಯೋಜನೆಗಳ ಮಾಹಿತಿ ಪಡೆದು ಮಾತನಾಡಿ, ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆಗೆ ಹೆಚ್ಚು ಒತ್ತು ನೀಡಬೇಕು. ಫುಡ್ ಪ್ರೊಸೆಸ್ಸಿಂಗ್ ಯೂನಿಟ್‌ಗಳನ್ನು ತೆರೆಯಲು ಹಾಗೂ ಮಹಿಳಾ ಸ್ವಯಂ ಸಂಘಗಳ ಮೂಲಕ ಸಿದ್ಧ ಆಹಾರ ಪದಾರ್ಥಗಳ ಉತ್ಪಾದನೆಗೆ ತೊಡಗಿಸಿಕೊಳ್ಳಲು ಉತ್ತೇಜಿಸಬೇಕು ಎಂದರು. ಸರಕಾರ ವಿವೇಕ ಯೋಜನೆಯಡಿ ಹೊಸದಾಗಿ 200 ಶಾಲಾ ತರಗತಿಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಿದ್ದು, ಅವುಗಳಲ್ಲಿ 160 ಪೂರ್ಣಗೊಂಡಿದ್ದು, ಬಾಕಿ ಉಳಿದ 40 ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಇವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಮೀನುಗಾರಿಕೆ ಚಟುವಟಿಕೆ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮರಣ ಹೊಂದಿದ ಸಂದರ್ಭದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ಮೀನುಗಾರರ ಸೊಸೈಟಿಯಲ್ಲಿ ಸದಸ್ಯತ್ವ ಹೊಂದಿದ ಮೀನುಗಾರರಿಗೆ ವಿಮೆಯ ಪ್ರೀಮಿಯಂ ಮೊತ್ತವನ್ನು ಸರಕಾರ ತುಂಬುತ್ತಿದೆ. ಒಂದೊಮ್ಮೆ ಅಪಘಾತ ಆಗಿ ಮರಣ ಹೊಂದಿದ ಮೀನುಗಾರರಿಗೆ 5 ಲಕ್ಷ ರೂ. ವರೆಗೆ ಪರಿಹಾರವನ್ನು ಒದಗಿಸಲಾಗುವುದು, ಕಳೆದ ಹಲವು ದಿನಗಳ ಹಿಂದೆ ಗಂಗೊಳ್ಳಿಯ ಬಂದರುಗಳಲ್ಲಿ ಬೆಂಕಿ ಅಪಘಾತದಿಂದ ಸುಟ್ಟು ಹೋದ ಬೋಟ್ ಮಾಲೀಕರಿಗೆ ಶೀಘ್ರದಲ್ಲಿಯೇ ಪರಿಹಾರ ಹಣವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಡಿತರ ಚೀಟಿಯಲ್ಲಿ ಸಣ್ಣ ಪುಟ್ಟ ತಪ್ಪುಗಳಿಂದಾಗಿ ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ. ಸರಕಾರ ತಿದ್ದುಪಡಿಗೆ ಕಾಲಾವಕಾಶ ನೀಡಿದ ಸಂದರ್ಭದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯಗಳನ್ನು ಆಹಾರ ಇಲಾಖೆಯವರು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಹೈಟೆಕ್ ಜಿಲ್ಲಾ ಆಸ್ಪತ್ರೆಯ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸ್ತುತ ನಿರ್ವಹಣೆ, ಸಿಬ್ಬಂದಿಗಳ ವೇತನ ನೀಡುವ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಅದನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಲು ಚರ್ಚಿಸಿದರು. ಗ್ಯಾರಂಟಿ ಯೋಜನೆಯ ಸರ್ವೇ ಕಾರ್ಯವನ್ನು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಕೈಗೊಳ್ಳುತ್ತಿದ್ದು, ಸರ್ವೇಕಾರ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಹಾಗೂ ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು. ಮುಂದಿನ ವರ್ಷದ ಆಯವ್ಯಯವನ್ನು ಸರಕಾರ ಘೋಷಿಸಿದೆ. ಇಲಾಖೆಗಳಿಗೆ ನೀಡುವ ಅನುದಾನಗಳ ಕ್ರಿಯಾ ಯೋಜನೆಗಳನ್ನು ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕು. ಬಜೆಟ್‌ನಲ್ಲಿ ನೀಡಿರುವ ಅನುದಾನಗಳ ಸಮರ್ಪಕ ಬಳಕೆ ಆಗದಿದ್ದಲ್ಲಿ ಮುಂಬರುವ ದಿನಗಳ ಬಜೆಟ್‌ನಲ್ಲಿ ಅನುದಾನದ ಕಡಿತ ಮಾಡುವ ಸಾಧ್ಯತೆ ಇರುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!