ಉಡುಪಿ, ಫೆ.29: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷರಾಗಿ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶಶಾಂಕ್ ಶಿವತ್ತಾಯ ಆಯ್ಕೆಯಾಗಿದ್ದಾರೆ. ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ, ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿಯೂ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಸೇವೆ ಸಲ್ಲಿಸಿದ್ದಾರೆ. ಗೋವಿಗಾಗಿ ಮೇವು ಅಭಿಯಾನವನ್ನು ಪರಿಣಾಮಕಾರಿಯಾಗಿ ಸಂಘಟಿಸಿರುವ ಇವರು ವಿವಿಧ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಮುನ್ನಡೆಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಶಶಾಂಕ್ ಶಿವತ್ತಾಯ, ತಮ್ಮ ವಿಧ್ಯಾರ್ಥಿ ಜೀವನದಲ್ಲಿ ಎಬಿವಿಪಿಯಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಂಡಿದ್ದು ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.