Tuesday, November 26, 2024
Tuesday, November 26, 2024

ನಿತ್ಯಾನಂದ ಒಳಕಾಡು, ವಿಶು ಶೆಟ್ಟಿಗೆ ಅಯೋಧ್ಯಾ ಮಂಡಲೋತ್ಸವ ರಜತಕಲಶ ಪ್ರದಾನ

ನಿತ್ಯಾನಂದ ಒಳಕಾಡು, ವಿಶು ಶೆಟ್ಟಿಗೆ ಅಯೋಧ್ಯಾ ಮಂಡಲೋತ್ಸವ ರಜತಕಲಶ ಪ್ರದಾನ

Date:

ಉಡುಪಿ, ಮಾ.‌1: ರಾಮರಾಜ್ಯದ ಪರಿಕಲ್ಪನೆಯಲ್ಲಿ ಅಶಕ್ತರ, ಅನಾಥ ಜನರ ಪಶು ಪಕ್ಷಿ ಪ್ರಾಣಿಗಳ ಶುಶ್ರೂಷೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ಇಬ್ಬರು ಸಾಮಾಜಿಕ ಧುರೀಣರಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರದ ಮೂಲಕ ಶ್ರೇಷ್ಠ ಗೌರವ ಪ್ರಾಪ್ತಿಯಾಗಿದೆ.

ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಅಂಬಲಪಾಡಿಯವರಿಗೆ ಅಯೋಧ್ಯಾ ರಾಮಮಂದಿರ ಟ್ರಸ್ಟಿಗಳಾದ ಪೇಜಾವರ ಶ್ರೀಗಳು ತಮ್ಮ‌ ನೇತೃತ್ವದಲ್ಲಿ ನಡೆಯುತ್ತಿರುವ ಶ್ರೀರಾಮ ದೇವರ ಮಂಡಲೋತ್ಸವದಲ್ಲಿ ಶುಕ್ರವಾರ ನಡೆದ ಉತ್ಸವದಲ್ಲಿ ಶ್ರೀರಾಮ ದೇವರಿಗೆ ಅಭಿಷೇಕ ಮಾಡಿದ ತಲಾ ಒಂದು ಕೆಜಿ ತೂಕದ ಒಂದು ಲಕ್ಷ ಮೌಲ್ಯದ ರಜತ ಕಲಶವನ್ನು ನೀಡಿ ಈರ್ವರ ಸಾಮಾಜಿಕ ಕಾರ್ಯಗಳನ್ನು ಅಭಿನಂದಿಸಿ ಸಮ್ಮಾನಿಸಿದ್ದಾರೆ.

ಶ್ರೀಗಳು ಇವರೀರ್ವರನ್ನೂ ಅಯೋಧ್ಯೆಗೆ ಬರಮಾಡಿಕೊಂಡು ಪುರಸ್ಕರಿಸಿ ಅವರ ಸಮಾಜಕಾರ್ಯಗಳನ್ನು ಕೊಂಡಾಡಿದ್ದಾರೆ. ರಾಮಮಂದಿರವಾಗಿದೆ ಇನ್ನು ರಾಮರಾಜ್ಯವಾಗಬೇಕು ಅದಕ್ಕಾಗಿ ಎಲ್ಲರೂ ಅಶಕ್ತರ ಸೇವೆ ಗೋಸೇವೆಗಳಿಗೆ ಮುಂದಾಗಿ ಎಲ್ಲರ ಕ್ಷೇಮ ಸಮಾಜದ ಸುಖ ಸಮೃದ್ಧಿಗಾಗಿ ಶ್ರಮಿಸಿಬೇಕೆಂದು ಎಲ್ಲೆಡೆ ಕರೆನೀಡುತ್ತಿರುವ ಶ್ರೀಗಳು, ಆ ಕಾರ್ಯಗಳನ್ನೇ ದಶಕಗಳಿಂದ ನಿಸ್ಮೃಹವಾಗಿ ನಡೆಸುತ್ತಿರುವ ಒಳಕಾಡು ಮತ್ತು ವಿಶು ಶೆಟ್ಟರನ್ನು ಸಂಮಾನಿಸಿರುವುದು ಅತ್ಯಂತ ವಿಶೇಷವಾಗಿದೆ.

ಮಾಜಿ ಶಾಸಕ ಕೆ. ರಘುಪತಿ ಭಟ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಅಂತಾರಾಷ್ಟ್ರೀಯ ಖ್ಯಾತಿಯ ವಯಲಿನ್ ಮಾಂತ್ರಿಕ ಡಾ. ಎಲ್ ಸುಬ್ರಮಣಿಯಮ್, ವಾಸುದೇವ ಭಟ್ ಪೆರಂಪಳ್ಳಿ, ಶ್ರೀನಿವಾಸ ಪ್ರಸಾದ್, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!