Tuesday, January 21, 2025
Tuesday, January 21, 2025

ವಸತಿ ಸಮುದಾಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಹಂತಹಂತವಾಗಿ ಕಲ್ಪಿಸಲಾಗುವುದು

ವಸತಿ ಸಮುದಾಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಹಂತಹಂತವಾಗಿ ಕಲ್ಪಿಸಲಾಗುವುದು

Date:

ಉಡುಪಿ, ಮಾ.2: ವಸತಿ ಹಂಚಿಕೆಯಾದ ಫಲಾನುಭವಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಸತಿ ಸಮುಚ್ಛಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಉಡುಪಿ ನಗರಸಭೆ ವ್ಯಾಪ್ತಿಯ ಹೆರ್ಗ ಸರಳಬೆಟ್ಟು ಪ್ರದೇಶದಲ್ಲಿರುವ 240 ಸರ್ಕಾರಿ ವಸತಿ ಸಮುಚ್ಛಯಗಳ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಿದರು. ಇದರ ನೇರ ಪ್ರಸಾರವನ್ನು ವಸತಿ ಸಮುಚ್ಛಯದ ಅಂಗಳದಲ್ಲಿ ಏರ್ಪಡಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಾಗೂ ನಗರಸಭೆಯ ಅನುದಾನದ ಅಡಿಯಲ್ಲಿ 240 ಮನೆಗಳನ್ನು ಹೆರ್ಗಾ ವ್ಯಾಪ್ತಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಸುಂದರವಾಗಿ ನಿಮಾಣ ಮಾಡಿದ್ದಾರೆ. ಈಗಾಗಲೇ ಪೂರ್ತಿ ಪ್ರಮಾಣದಲ್ಲಿ ಮನೆಯ ಹಂಚಿಕೆಯಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರತಿಯೊಬ್ಬರೂ ಸ್ವಂತ ಮನೆ ಹೊಂದಬೇಕೆಂಬ ಕನಸನ್ನು ಬಡವ ಹಾಗೂ ಶ್ರೀಮಂತರು ಹೊಂದಿರುತ್ತಾರೆ. ಇದನ್ನು ನನಸಾಗಿಸಲು ಸರಕಾರ ಅನೇಕ ಯೋಜನೆಗಳಡಿಯಲ್ಲಿ ಕಾರ್ಯರೂಪಕ್ಕೆ ತರಲು ಮುಂದಾಗಿದೆ ಎಂದರು. ಇಂದು ರಾಜ್ಯದಾದ್ಯಂತ 1,80,000 ಮನೆಗಳ ನಿರ್ಮಾಣಕ್ಕೆ ಗುರಿ ಹೊಂದಿತ್ತು. ಈಗಾಗಲೇ 36,000 ಮನೆಗಳ ನಿರ್ಮಾಣ ಪೂರ್ಣಗೊಂಡು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುತ್ತಿದ್ದಾರೆ. ಇದು ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದರು. ಹೆರ್ಗಾ ಸರಳಬೆಟ್ಟು ಪ್ರದೇಶದಲಿರುವ ಸರಕಾರಿ ವಸತಿ ಸಮುಚ್ಛಯ ಕಟ್ಟಡಕ್ಕೆ ತಲುಪಲು ಇರುವ ಕಚ್ಛಾ ರಸ್ತೆಯನ್ನು ಪಕ್ಕಾ ಕಾಂಕ್ರೇಟ್ ರಸ್ತೆಯನ್ನಾಗಿಸಬೇಕು. ವಿದ್ಯುತ್ ದಾರಿದೀಪ, ಸುಸಜ್ಜಿತ ಆಟದ ಮೈದಾನ, ಉದ್ಯಾನವನ, ಅಂಗನವಾಡಿ ಕೇಂದ್ರ ಸೇರಿದಂತೆ
ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ಸ್ಥಳೀಯ ಜನರ ಬೇಡಿಕೆ ಇದೆ. ಇವುಗಳನ್ನು ಹಂತಹಂತವಾಗಿ ಕಲ್ಪಿಸಲಾಗುವುದು ಎಂದ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಲೋಕಾರ್ಪಣೆ ಕುರಿತು ಶುಭ ಕೋರಿರುವುದಾಗಿ ತಿಳಿಸಿದರು.

ನಗರಸಭಾ ಸದಸ್ಯರಾದ ವಿಜಯಲಕ್ಷ್ಮೀ, ಅಮೃತ ಕೃಷ್ಣಮೂರ್ತಿ, ಪೌರಾಯುಕ್ತ ರಾಯಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಪಾಲಕ ಅಭಿಯಂತರ ರಂಗಯ್ಯ ಬಡಿಗೆರ ಸ್ವಾಗತಿಸಿ, ವಿಜಯ್ ಕುಮಾರ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆಯ ಕೀ ಹಾಗೂ ದಾಖಲೆ ಪತ್ರವನ್ನು ಹಸ್ತಾಂತರಿಸಲಾಯಿತು.

ಪ್ರತೀ ವಸತಿ ಗೃಹಗಳು 394 ಸ್ಕ್ವೇರ್ ಫೀಟ್ ಅಳತೆಯಿದ್ದು, 8.22 ಎಕರೆ ವಿಸ್ತೀರ್ಣದಲ್ಲಿ ತಲಾ 10 ರಂತೆ 24 ಫ್ಲಾಟ್‌ಗಳಲ್ಲಿ 240 ಮನೆಗಳನ್ನು ಪ್ರತೀ ಮನೆಗೆ 7.42 ಲಕ್ಷ ರೂ. ವ್ಯಯಿಸಿ ನಿರ್ಮಾಣ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ ಬ್ಯಾಂಕ್ ವತಿಯಿಂದ 3.8 ಲಕ್ಷ ಸಾಲ, ಕೇಂದ್ರ ಸರ್ಕಾರ 2 ಲಕ್ಷ, ರಾಜ್ಯ ಸರ್ಕಾರ 1,20,000 ರೂ ಹಾಗೂ ನಗರಸಭೆ 75,000 ರೂ ಬಾಕಿ ಉಳಿದ ಹಣವನ್ನು ಫಲಾನುಭವಿಗಳು ಸಂದಾಯದೊಂದಿಗೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಬ್ಯಾಂಕ್ ಸಾಲ 2.58 ಲಕ್ಷ, 2 ಲಕ್ಷ ರೂ. ಕೇಂದ್ರ ಸರ್ಕಾರ, 1.5 ಲಕ್ಷ ರೂ, ರಾಜ್ಯ ಸರ್ಕಾರ, 75,000 ರೂ. ನಗರಸಭೆ ಬಾಕಿ ಉಳಿದ ಹಣವನ್ನು ಫಲಾನುಭವಿಗಳು ಭರಿಸಿದ್ದು, ಈಗಾಗಲೇ 240 ಮನೆಗಳಲ್ಲಿ 31 ಮನೆಗಳಲ್ಲಿ ಜನರು ವಾಸಿಸಲು ಪ್ರಾರಂಭಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!