Saturday, October 26, 2024
Saturday, October 26, 2024

ಪೋಲಿಯೋ ಮುಕ್ತ ಸಮಾಜ ನಿರ್ಮಾಣ

ಪೋಲಿಯೋ ಮುಕ್ತ ಸಮಾಜ ನಿರ್ಮಾಣ

Date:

ಉಡುಪಿ, ಮಾ.2: ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕರಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಶನಿವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್, ಸಿ.ಎಸ್.ಐ ಲೋಂಬೋರ್ಡ್ ಸ್ಕೂಲ್ ಆಫ್ ನರ್ಸಿಂಗ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಪೋಲಿಯೋದಿಂದ ರಕ್ಷಿಸಲು ಹಾಗೂ ರೋಗ ನಿರೋಧಕತೆಯನ್ನು ಹೆಚ್ಚಿಸಲು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಪಲ್ಸ್ ಪೋಲಿಯೋ ಲಸಿಕೆ ಕುರಿತು ಅರಿವು ಮೂಡಿಸುವುದರೊಂದಿಗೆ ಅದರಿಂದ ಉಂಟಾಗುವ ಅಂಗವೈಕಲ್ಯತೆಯನ್ನು ಹಾಗೂ ಅದರ ಭೀಕರ ಪರಿಣಾಮವನ್ನು ತಡೆಗಟ್ಟುವಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡದ, ನಗರಸಭಾ ಸದಸ್ಯೆ ರಶ್ಮಿ ಭಟ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋಸ್ನಾ ಬಿ ಕೆ., ಡಾ. ರಾಜ್ ಗೋಪಾಲ ಭಂಡಾರಿ, ಡಾ. ವಾಸುದೇವ ಆರ್.ಎಮ್ ಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಲೆಂಬೋರ್ಡ್ ಸ್ಕೂಲ್ ಆಫ್ ನರ್ಸಿಂಗ್ ಸಮೂಹ ಸಂಸ್ಥೆಗಳ ಪ್ರಾಧ್ಯಪಕರು ಹಾಗೂ ವಿದ್ಯಾರ್ಥಿಗಳು, ಜಿಲ್ಲಾ ಪೋಲೀಸ್ ಉಪನಿರೀಕ್ಷಕರ ಕಛೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ನಗರಸಭಾ ಅಧಿಕಾರಿ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಿಂದ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಮಾರೋಪಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...
error: Content is protected !!