Wednesday, January 22, 2025
Wednesday, January 22, 2025

‘ಯೋಗದಿಂದ ಆರೋಗ್ಯ’ ಉಪನ್ಯಾಸ

‘ಯೋಗದಿಂದ ಆರೋಗ್ಯ’ ಉಪನ್ಯಾಸ

Date:

ಉಡುಪಿ, ಮಾ.6: ಬ್ರಾಹ್ಮಣ ಮಹಾಸಭಾ ಪುತ್ತೂರು ಇವರ ವತಿಯಿಂದ ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತಿ ಸಭಾಗ್ರಹದಲ್ಲಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಯೋಗ ತಜ್ಞರು ಮತ್ತು ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರದ ಹಿರಿಯ ಯೋಗ ಗುರುಗಳಾದ ಪಿ.ವಿ. ಭಟ್ ಇವರಿಂದ ಯೋಗ ಮತ್ತು ಆರೋಗ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ದೈನಂದಿನ ಯಾಂತ್ರಿಕ ಬದುಕಿನಿಂದ ಜಡ ಕಟ್ಟಿದ ನಮ್ಮ ದೇಹ ಮತ್ತು ಮನಸ್ಸನ್ನು ಪ್ರಫುಲ್ಲಗೊಳಿಸಲು ಯೋಗ ಅತ್ಯಂತ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನ ಶೈಲಿಯಾಗಿ ಅಳವಡಿಸಿಕೊಂಡು ನಿರಂತರ ಯೋಗಾಭ್ಯಾಸ ಮಾಡಿ ತಾವು ಆರೋಗ್ಯವಂತರಾಗುವುದಲ್ಲದೆ ಸ್ವಸ್ಥ, ಸದೃಢ ಸಮಾಜವನ್ನು ರೂಪಿಸಲು ಸಹಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟರು.

ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಪುತ್ತೂರು ಶಾಖೆಯ ಯೋಗ ಬಂಧುಗಳಿಂದ ಯೋಗಾಸನದ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ನಿರಂತರ ಯೋಗಾಭ್ಯಾಸದಿಂದ ಆಗುವ ಪ್ರಯೋಜನ ಮತ್ತು ಪರಿಣಾಮಗಳ ಬಗ್ಗೆ ತಿಳಿಸಲಾಯಿತು. ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ಗುರುಗಳಾದ ಪಿ.ವಿ.ಭಟ್ ಮತ್ತು ಯೋಗಾರ್ಥಿಗಳಾದ ಸುನೀತಾ, ಚೈತನ್ಯ, ಅನುಪಮಾ, ಲಕ್ಷ್ಮೀಕುಮಾರಿ, ಶ್ರೀಲಕ್ಷ್ಮಿ, ಪುಷ್ಪಾಂಜಲಿ ಪ್ರಕಾಶ್, ಗಾಯತ್ರಿ ಭಟ್ ಇವರನ್ನು ಗೌರವಿಸಲಾಯಿತು. ಹಿರಿಯ ಸದಸ್ಯರಾದ ಡಾ. ಶ್ರೀಪತಿ ರಾವ್ ಮತ್ತು ಕಾಂತಿ ರಾವ್ ದಂಪತಿಗಳನ್ನು ಗೌರವಿಸಲಾಯಿತು. ಫೆಬ್ರವರಿ ತಿಂಗಳಲ್ಲಿ ಹುಟ್ಟುಹಬ್ಬ ಆಚರಿಸಿದ ಸದಸ್ಯರನ್ನು ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿದ ದಂಪತಿಗಳನ್ನು ಅಭಿನಂದಿಸಲಾಯಿತು.

ಪುತ್ತೂರು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶುಭಾ ಬಾಲ್ತಿಲ್ಲಾಯ ಪ್ರಸ್ತಾವಿಕವಾವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಮಂಜುಳಾ ವಿ. ಪ್ರಸಾದ್, ಆಪದ್ಬಾಂಧವ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಉಡುಪ ಉಪಸ್ಥಿತರಿದ್ದರು. ಚೈತನ್ಯ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಕೃಷ್ಣಪ್ರಸಾದ್ ಕಾರಂತ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!