ಬ್ರಹ್ಮಾವರ, ಮಾ.7: ಬ್ರಹ್ಮಾವರ ವಾರಂಬಳ್ಳಿಯಲ್ಲಿ ಸುಮಾರು 90 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಮೀನು ಮಾರುಕಟ್ಟೆಯ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೂಮಿಪೂಜೆ ನೆರವೇರಿಸಿದರು.
ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ ಕುಲಾಲ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪಕ್ಷದ ಮುಖಂಡರು, ಬ್ರಹ್ಮಾವರ ಮೀನು ಮಾರುಕಟ್ಟೆಯ ಮಹಿಳಾ ಮೀನುಗಾರರ ಸಂಘದ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.