Monday, November 25, 2024
Monday, November 25, 2024

ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

Date:

ಉಡುಪಿ, ಮಾ.10: ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ಸಮಾಲೋಚನಾ ಸಭೆಯ ಸಂಪನ್ಮೂಲ ವ್ಯಕ್ತಿಗಳಾಗಿ ಅದಮಾರು ಎಜುಕೇಶನಲ್ ಕೌನ್ಸಿಲ್‍ನ ಆಡಳಿತಾಧಿಕಾರಿಯಾದ ಡಾ. ಎ. ಪಿ. ಭಟ್, ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಗೋಪಾಲಕೃಷ್ಣ ಭಟ್, ಉಪನ್ಯಾಸಕರೂ, ಕಲಾವಿದರೂ ಆದ ಶ್ರುತಕೀರ್ತಿ ರಾಜ್ ಭಾಗವಹಿಸಿದ್ದರು. ಸಂಸ್ಥೆಯ ದಾನಿ ಯು. ಎಸ್. ರಾಜಗೋಪಾಲ ಆಚಾರ್ಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾರ್ಗದರ್ಶಿ ಮಾತುಗಳನ್ನಾಡಿದರು.

ವಿದ್ಯಾಪೋಷಕ್ ಫಲಾನುಭವಿ, ಪ್ರಸ್ತುತ ಉದ್ಯೋಗದಲ್ಲಿರುವ ಪ್ರಜ್ವಲ್ ಶೆಟ್ಟಿ ಮತ್ತು ಸಿ.ಎ.ವಿದ್ಯಾರ್ಥಿನಿ ಕವನಾ ತಮ್ಮ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಯ ದಾನಿಗಳಾದ ಎ. ಮುರಾರಿ ರಾವ್–ಚಂದ್ರಕಲಾ ರಾವ್ ದಂಪತಿಗಳು ನೀಡಿದ ಲ್ಯಾಪ್‍ಟಾಪ್‍ನ್ನು ವಿದ್ಯಾಪೋಷಕ್ ಇಂಜಿನೀಯರಿಂಗ್ ವಿದ್ಯಾರ್ಥಿನಿ ಅಖಿಲಾಳಿಗೆ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿಯವರು ಹಸ್ತಾಂತರಿಸಿದರು. 230 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಶಿಬಿರದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ್, ಅಶೋಕ್ ಎಂ., ಗಣೇಶ್ ರಾವ್ ಎಲ್ಲೂರು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!