Tuesday, January 21, 2025
Tuesday, January 21, 2025

ಜಿಲ್ಲಾಮಟ್ಟದ ಯುವ ಸಂಸತ್ತು ಸ್ಪರ್ಧೆ

ಜಿಲ್ಲಾಮಟ್ಟದ ಯುವ ಸಂಸತ್ತು ಸ್ಪರ್ಧೆ

Date:

ಉಡುಪಿ: ಕೇಂದ್ರ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಈ ಕಾರ್ಯಕ್ರಮ ನಡೆಸಲು ರಾಜ್ಯದ ಉಡುಪಿ, ಮೈಸೂರು, ಗುಲ್ಬರ್ಗ, ದಕ್ಷಿಣ ಕನ್ನಡ, ರಾಯಚೂರು ಹಾಗೂ ಕಾರವಾರ ಆಯ್ಕೆಯಾದ ನೊಡೆಲ್ ಕೇಂದ್ರಗಳು. ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳು ಬರಲಿದ್ದು, ಆಯಾ ಜಿಲ್ಲೆಗಳಲ್ಲಿ ಭಾಗವಹಿಸುವ ಯುವ ಪ್ರತಿಭೆಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲಿಯೇ ಸ್ಕ್ರೀನಿಂಗ್ ಮಾಡಿ ಜಿಲ್ಲೆಯಿಂದ ಆಯ್ಕೆಯಾದ ಅತ್ಯುತ್ತಮ ಅಭ್ಯರ್ಥಿಗಳನ್ನು ಉಡುಪಿಯಿಂದ ಆನ್‌ಲೈನ್ ಮೂಲಕ ಫೆಬ್ರವರಿ 23 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಜಿಲ್ಲೆಗಳನ್ನು ಪ್ರತಿನಿಧಿಸುವರು.

ಪ್ರತೀ ಜಿಲ್ಲೆಯಿಂದ ಇಬ್ಬರು ಅತ್ಯುತ್ತಮ ಅಭ್ಯರ್ಥಿಗಳ ಆಯ್ಕೆಯನ್ನು ಉಡುಪಿಯಲ್ಲಿ ನಡೆಸಿ ಅವರ ಹೆಸರನ್ನು ರಾಜ್ಯ ಮಟ್ಟಕ್ಕೆ ಶಿಫಾರಸು ಮಾಡಲಾಗುವುದು.

ಈ ಕಾರ್ಯಕ್ರಮವು ಜಿಲ್ಲಾ ಮಟ್ಟದಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಸಲಾಗುವುದು ಹಾಗೂ ರಾಷ್ಟ್ರಮಟ್ಟದಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಈ ಸ್ಪರ್ಧೆ ನಡೆಯಲಿರುವುದರಿಂದ ರಾಷ್ಟ್ರಮಟ್ಟದಲ್ಲಿ ಭಾಗವಹಿಲಿಚ್ಛಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು.

ಕಾರ್ಯಕ್ರಮದಲ್ಲಿ ಜಿಲ್ಲೆಯ ನಿವಾಸಿಯಾಗಿರುವ, 15 ರಿಂದ 29 ವರ್ಷ ವಯೋಮಿತಿಯ ಯುವಕ ಹಾಗೂ ಯುವತಿಯರು ಮಾತ್ರ ಭಾಗವಹಿಸಲು ಅರ್ಹರಿರುವವರು. ನೂಡೆಲ್ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳು ಆನ್‌ಲೈನ್ (ವರ್ಚುವಲ್) ಮೂಲಕ ನಡೆಸಲಾಗುವುದು.

ಜಿಲ್ಲಾ ಮಟ್ಟ್ಲದ ಸ್ಪರ್ಧೆಯ ಭಾಷಣದ ವಿಷಯ ಹಾಗೂ ಆಯೋಜನೆ:  ಹೊಸ ಭಾರತವಾಗಿರಿ ಮತ್ತು ಪರಿಹಾರಗಳನ್ನು ಕಂಡುಕೊಳ್ಳಿ ಮತ್ತು ಕೊಡುಗೆ ನೀಡಿ (ಕನ್ನಡ), Be the New India and find solutions & contribute to Policy (ಇಂಗ್ಲೀಷ್) ಮತ್ತು “नया भारत बनें और समाधान खोजें और नीति में योगदान करें” (ಹಿಂದಿ) ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯು ಫೆ. 19 ರಂದು ಮಧ್ಯಾಹ್ನ 1 ರಿಂದ 4.00 ರ ವರೆಗೆ ಮಣಿಪಾಲ ಜಿಲ್ಲಾಧಿಕಾರಿಯ ಕಛೇರಿ ಆವರಣದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಕಚೇರಿಯಲ್ಲಿ ನಡೆಯಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ [email protected] ಅಥವಾ ಜಿಲ್ಲಾ ಯುವ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ, ಬಿ. ಬ್ಲಾಕ್, ಜಿಲ್ಲಾಧಿಕಾರಿಯ ಕಛೇರಿ ಆವರಣ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ 0820-2574992, ಮೊ.ನಂ: 9958325151, ಲೆಕ್ಕಾಧಿಕಾರಿ ಮೊ.ನಂ: 8762114883 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!