Tuesday, February 25, 2025
Tuesday, February 25, 2025

ಉಡುಪಿ: ಹೆಚ್ಚಾಗುತ್ತಿದೆ ತಾಪಮಾನ, ಹೀಟ್ ಸ್ಟ್ರೋಕ್ ಸಾಧ್ಯತೆ

ಉಡುಪಿ: ಹೆಚ್ಚಾಗುತ್ತಿದೆ ತಾಪಮಾನ, ಹೀಟ್ ಸ್ಟ್ರೋಕ್ ಸಾಧ್ಯತೆ

Date:

ಉಡುಪಿ, ಮಾ.‌11: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳನ್ನು ನೀಡಿದೆ.

ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಸೇವಿಸಬೇಕು. ಬೆಳಗ್ಗೆ 11 ರಿಂದ ಸಂಜೆ 4 ರ ವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಸಾಕಷ್ಟು ನೀರಿನೊಂದಿಗೆ ಮಜ್ಜಿಗೆ ಮತ್ತು ಗ್ಲೂಕೋಸ್ / (ಓ.ಆರ್.ಎಸ್) ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಜೊತೆಗೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಳ್ಳಬೇಕು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು. ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್‌ಗಳ ಮಧ್ಯ ಇಡಬಹುದು. ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಯಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ತುರ್ತು ಸೇವೆಗಾಗಿ ಶುಲ್ಕ ರಹಿತ:1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದ ಆಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!