ಉಡುಪಿ, ಮಾ.12: ಶ್ರೀ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ದೀಕ್ಷೆ ಪಡೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಹಾಲಿ ಉಪಮುಖ್ಯಮಂತ್ರಗಳೂ ಆದ ದೇವೇಂದ್ರ ಫಡ್ನವೀಸ್
ಮಂಗಳವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಪುತ್ತಿಗೆ ಕಿರಿಯ ಶ್ರೀಪಾದರು, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ
Date: