Tuesday, January 21, 2025
Tuesday, January 21, 2025

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನ ಮಾಡಲು ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ, ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ, ಕನಿಷ್ಟ 10 ಹೆ. ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರುವ ಹಾಗೂ ಆ ವ್ಯಾಪ್ತಿಯ ಕೃಷಿ ವಿಶ್ವವಿದ್ಯಾನಿಲಯದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳು ಫೆಬ್ರವರಿ 24 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾ ಆಡಳಿತ ಕಛೇರಿ ಸಂಕೀರ್ಣ, ಎರಡನೆ ಮಹಡಿ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!