ಉಡುಪಿ, ಮಾ.13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಬುಧವಾರ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನ ವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಜಯಪ್ರಕಾಶ್ ಹೆಗಡೆಯವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.
ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
Date: