Thursday, February 27, 2025
Thursday, February 27, 2025

ಬಾಲ್ಯದಲ್ಲಿ ಮಕ್ಕಳು ಸರಿ ದಾರಿಯಲ್ಲಿ ಹೋಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾಯಾಧೀಶ ಸೋಮನಾಥ

ಬಾಲ್ಯದಲ್ಲಿ ಮಕ್ಕಳು ಸರಿ ದಾರಿಯಲ್ಲಿ ಹೋಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾಯಾಧೀಶ ಸೋಮನಾಥ

Date:

ಉಡುಪಿ, ಮಾ.15: ಬಾಲ್ಯದಲ್ಲಿ ಬಡತನ ಹಾಗೂ ಇನ್ನಿತರ ಸಮಸ್ಯೆಗಳು ಮಕ್ಕಳು ಅಪರಾಧವನ್ನು ಮಾಡುವಂತೆ ಮಾಡುತ್ತದೆ, ಮುಂದಿನ ದಿನಗಳಲ್ಲಿ ಅಂತಹವರನ್ನು ಗುರುತಿಸಿ ಅವರಿಗೆ ಉತ್ತಮ ಜೀವನವನ್ನು ಕಲ್ಪಿಸುವುದರೊಂದಿಗೆ ಸುಸ್ತಿರ ಸಮಾಜದ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಬಾಲನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶ ಸೋಮನಾಥ ಹೇಳಿದರು. ಅವರು ಶುಕ್ರವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸರಕಾರಿ ಪ್ರಾಥಮಿಕ ಆಸ್ಪತ್ರೆಯ ವೈದ್ಯಾಧಿಕಾರಿ, ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಬಾಲನ್ಯಾಯ ಕಾಯ್ದೆ 2015 ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ದತ್ತು ಕಾರ್ಯಕ್ರಮದ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಕ್ಕಳ ಕುರಿತಾದ ಕಾನೂನುಗಳು ಬದಲಾದಂತೆ ಕಾನೂನಿನ ತಿಳುವಳಿಕೆಯನ್ನು ಅಧಿಕಾರಿಗಳು ಪಡೆದುಕೊಳ್ಳವುದು ಪ್ರಮುಖವಾಗಿದ್ದು, ಅಧಿಕಾರಿಗಳು ಸಂಪೂರ್ಣವಾಗಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದ ಅವರು ಮಕ್ಕಳ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ತಡೆಗಟ್ಟಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಬಿ ಫುಟಾರ್ಡೊ, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ ಆದರೆ ಇಂದಿನ ಮಕ್ಕಳು ಇತ್ತೀಚಿನ ದಿನಗಳಲ್ಲಿ ಪೋಷಕರೊಂದಿಗೆ ಸಮಾಲೋಚನೆ ನಡೆಸುವುದು ತೀರ ಕಡಿಮೆಯಾಗಿದ್ದು ಮಕ್ಕಳನ್ನು ಮಾಧ್ಯಮಗಳು ಮಕ್ಕಳನ್ನು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡುತ್ತಿದ್ದು ಅಂತಹ ವಿಚಾರಗಳು ನಡೆಯಲು ಅವಕಾಶ ನೀಡಬಾರದು ಎಂದರು. ವಕೀಲ ಪ್ರಶಾಂತ್ ಎಚ್.ಎಮ್ ಫೋಕ್ಸೋ ಮತ್ತು ಬಾಲ್ಯವಿವಾಹ, ಬಾಲನ್ಯಾಯ ಮಂಡಳಿ ಸದಸ್ಯ ರಾಜೇಶ್ ಬಾಲನ್ಯಾಯ ಕಾಯ್ದೆ, ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ದ.ಕ. ಜಿಲ್ಲಾ ಅಧ್ಯಕ್ಷ ರೆನ್ನಿ ಡಿಸೋಜಾ ದತ್ತು ಅಧಿನಿಯಮ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಎಸ್‌ಪಿ ಡಾ. ಸಿದ್ಧಲಿಂಗಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಸುರಕ್ಷಾ ವಂದಿಸಿ, ಜ್ಯೋತಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!