ಉಡುಪಿ, ಮಾ.16: ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕ ವಿಭಾಗದಲ್ಲಿ ಗುರುವಾರ ವಿಶ್ವ ಕಿಡ್ನಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಿ.ಪಿ.ಗಡಾದ ಉದ್ಘಾಟಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ಮೇಘ ಪೈ, ಡಾ.ವಾಸುದೇವ್ ಎಸ್, ಡಾ.ನಿಕಿನ್ ಶೆಟ್ಟಿ ಜಿಲ್ಲಾ ಆಸ್ಪತ್ರೆ ಉಡುಪಿ ಮತ್ತು ಜಿಲ್ಲಾ ಆಸ್ಪತ್ರೆಯ ಎಲ್ಲಾ ತಜ್ಞ ವೈದ್ಯಧಿಕಾರಿಗಳು ಹಾಗೂ ಆಸ್ಪತ್ರೆ ಶುಶೂಷಕಾಧಿಕಾರಿಗಳು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಕಿಡ್ನಿ ದಿನಾಚರಣೆ
ವಿಶ್ವ ಕಿಡ್ನಿ ದಿನಾಚರಣೆ
Date: