ಮಂಗಳೂರು, ಮಾ.17: ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಾಗೂ 48 ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಆಗಮಿಸುವ ಮುನ್ನ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭಾನುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಮತ್ತು ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಸ್ವಾಗತಿಸಿದರು.