Sunday, January 19, 2025
Sunday, January 19, 2025

ಲೋಕಸಭಾ ಚುನಾವಣೆ: ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

ಲೋಕಸಭಾ ಚುನಾವಣೆ: ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

Date:

ಉಡುಪಿ, ಮಾ18: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿದ್ದು, ಏಪ್ರಿಲ್ 26 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಶಸ್ತ್ರಾಸ್ತ್ರಗಳ ಠೇವಣಿ ಕಾರ್ಯಕ್ಕೆ ಸ್ಕ್ರೀನಿಂಗ್ ಕಮಿಟಿ ರಚನೆಯಾಗಿರುತ್ತದೆ. ಮುಕ್ತ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದನ್ನು ಖಾತರಿಪಡಿಸುವ ಸಲುವಾಗಿ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರನ್ನು ಪೂರ್ವಭಾವಿ ಪರಿಶೀಲನೆ ಮಾಡಿ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಆಯುಧ, ಶಸ್ತ್ರಾಸ್ತ್ರ, ಮಾರಕಾಯುಧಗಳು ಹಾಗೂ ಮದ್ದುಗುಂಡುಗಳನ್ನು ಹೊಂದುವುದು, ಸಾಗಿಸುವುದು ಮತ್ತು ಬಳಸುವುದರ ಮೇಲೆ ನಿರ್ಬಂಧಗಳನ್ನು ವಿಧಿಸುವುದು ಅತೀ ಅವಶ್ಯಕವೆಂಬುದನ್ನು ಮನಗಂಡು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರು ದಂಡಪ್ರಕ್ರಿಯೆ ಸಂಹಿತೆಯ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶ ಹೊರಡಿಸಿರುತ್ತಾರೆ.

ಜಿಲ್ಲೆಯಾದ್ಯಂತ ಆದೇಶ ಹೊರಡಿಸಿದ ದಿನಾಂಕದಿಂದ ಲೋಕಸಭಾ ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗಿನ ಅವಧಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದುಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆತ್ಮರಕ್ಷಣೆಗಾಗಿ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು (ಎಸ್‌ಬಿಬಿಎಲ್/ಡಿಬಿಬಿಎಲ್/ಎಸ್‌ಬಿಎಂಎಲ್/ಡಿಬಿಎಂಎಲ್/ಎನ್‌ಪಿಬಿ ರೈಫಲ್/ರಿವಾಲ್ವರ್/ಪಿಸ್ತೂಲ್) ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್‌ಗಳಲ್ಲಿ ಮಾತ್ರ ಕಡ್ಡಾಯವಾಗಿ ವಿಳಂಬ ಮಾಡದೇ ಠೇವಣಿ ಮಾಡಿ ರಶೀದಿ ಪಡೆಯಬೇಕು. ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದಾಗಿದೆ. ಈ ನಿಷೇಧ ಆದೇಶವು ಸರ್ಕಾರಿ ಕರ್ತವ್ಯಕ್ಕೆ ಹಾಗೂ ಬ್ಯಾಂಕ್ ಸೆಕ್ಯೂರಿಟಿ ಸಂಸ್ಥೆಗಳ ಭದ್ರತೆ ಹಾಗೂ ಸಂರಕ್ಷತಾ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ವೇಳೆ ಶಸ್ತ್ರಾಸ್ತ್ರ ಆಯುಧ ಬಳಸುವುದಕ್ಕೆ ಅನ್ವಯವಾಗುವುದಿಲ್ಲ.

ಸದರಿ ಠೇವಣಿ ಆದೇಶದಿಂದ ವಿನಾಯಿತಿ ಕೋರುವ ಶಸ್ತ್ರ ಪರವಾನಿಗೆದಾರರುಗಳು ಮಾರ್ಚ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸುಬೇಕು. ಸದರಿ ಅರ್ಜಿಗಳನ್ನು ಸ್ಕ್ರೀನಿಂಗ್ ಕಮಿಟಿ ಮುಂದೆ ಮಂಡಿಸಿ ಅರ್ಜಿಗಳ ಅವಶ್ಯಕತೆ ಹಾಗೂ ನೈಜ್ಯತೆಯ ಬಗ್ಗೆ ಪರಿಶೀಲಿಸಿ ಸಮಿತಿಯ ನಿರ್ಣಯದಂತೆ ವಿನಾಯಿತಿ ನೀಡುವ ಬಗ್ಗೆ ಕ್ರಮವಹಿಸಲಾಗುವುದು. ಮೇಲ್ಕಂಡ ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತ್ರಾಸ್ತ್ರ ಹಾಗೂ ಆಯುಧ ಇತ್ಯಾದಿಗಳ ಸಂಗ್ರಹಣೆ, ಬಳಕೆ ಹಾಗೂ ಸಾಗಾಟ ಮಾಡುತ್ತಿರುವ ಸುಳಿವು ದೊರೆತಲ್ಲಿ ಈ ಕುರಿತು ಹತ್ತಿರದ ಪೋಲೀಸ್ ಠಾಣೆಗೆ ತಕ್ಷಣವೇ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!