Sunday, September 22, 2024
Sunday, September 22, 2024

ಹಿಜಾಬ್ – ಕೇಸರಿ ಶಾಲು ವಿವಾದ: ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಹಿಜಾಬ್ – ಕೇಸರಿ ಶಾಲು ವಿವಾದ: ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Date:

ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ಫೆಬ್ರವರಿ 21 ರ ಬೆಳಗ್ಗೆ 6 ಗಂಟೆಯಿಂದ ಫೆ. 28 ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

ಈ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಯನ್ನು, ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿಂಧಿಸುವಂತಹ ಯಾವುದೇ ಘೋಷಣೆ, ಅವಾಚ್ಯ ಶಬ್ಧಗಳ ಬಳಕೆ, ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆ, ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಬಂದೂಕು, ಚಾಕು, ಕೋಲು, ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ವಸ್ತುಗಳ ಒಯ್ಯುವಿಕೆ, ಪಟಾಕಿ ಸಿಡಿಸುವುದು, ಸ್ಪೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಹಾಗೂ ರಾಜಕೀಯ ಸಭೆ ಸಮಾರಂಭ ನಡೆಸುವುದು, ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದು, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಕೂಗುವುದು, ಆವೇಶಭರಿತ ಭಾಷಣ ಮಾಡುವುದು, ಭಿತ್ತಿ ಪತ್ರಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!