ಉಡುಪಿ, ಮಾ.21: ಕಳೆದ ಹಲವು ತಿಂಗಳಿನಿಂದ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಪೂರ್ಣಕಾಲಿಕ ಸರ್ಜನ್ ನಿಯುಕ್ತಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಾಕಷ್ಟು ಅವ್ಯವಸ್ಥೆ ಇದ್ದು ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದರು. ಈ ನಿಟ್ಟಿನಲ್ಲಿ ಈ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹರಿಸಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುವಂತೆ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಉಡುಪಿ ಜಿಲ್ಲಾಸ್ಪತ್ರೆಗೆ ನೂತನವಾಗಿ ನಿಯುಕ್ತಿಗೊಂಡ ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್. ಅವರಿಗೆ ಮನವಿ ಸಲ್ಲಿಸಲಾಯಿತು. ವಿಜಯ ಕೊಡವೂರು, ಸತೀಶ್ ಸಾಲ್ಯಾನ್ ಮಣಿಪಾಲ, ರತ್ನಾಕರ್ ಶೆಟ್ಟಿ ಆತ್ರಾಡಿ, ಪ್ರಜೀತ್ ಮಲ್ಪೆ, ಅನಿಲ್ ಹನುಮಂತನಗರ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಸ್ಪತ್ರೆಯ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸಲು ಮನವಿ
ಉಡುಪಿ ಜಿಲ್ಲಾಸ್ಪತ್ರೆಯ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸಲು ಮನವಿ
Date: