Monday, November 25, 2024
Monday, November 25, 2024

ಉಡುಪಿ ಜಿಲ್ಲೆಯಲ್ಲಿ ಏ. 1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲು ಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ಏ. 1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲು ಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ

Date:

ಉಡುಪಿ, ಮಾ.21: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ 30 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಲಸಿಕೆ ಕಾರ್ಯನಿರ್ವಹಿಸಲು ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು. ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಒಂದು ವೇಳೆ ನಿರ್ಲಕ್ಷ್ಯ ಮಾಡಿದ್ದಲ್ಲಿ ಒಂದು ಜಾನುವಾರಿಗೆ ಬಂದ ಕಾಯಿಲೆ ಮತ್ತೊಂದು ಜಾನುವಾರುಗಳಿಗೆ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು. ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಕುರಿತು ಶಾಲೆಗಳಲ್ಲಿ, ನಗರಸಭೆ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವ ಮೂಲಕ ಹೆಚ್ಚು ಪ್ರಚಾರ ಕೈಗೊಂಡು, ರೈತರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವುದರೊಂದಿಗೆ ಪ್ರತಿಶತಃ ನೂರರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಮಂಗಳೂರು ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!