ಉಡುಪಿ, ಮಾ.23: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣಮಠ ಉಡುಪಿ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ಉಡುಪಿ ಜಿಲ್ಲಾ ಘಟಕ ಮತ್ತು ತಾಲೂಕು ಘಟಕ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಗಮಕ ಕಲಾ ಸಮ್ಮೇಳನದ ಉದ್ಘಾಟನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು. ಸಮ್ಮೇಳನದ ಅಧ್ಯಕ್ಷರಾದ ಗಮಕಿ ಉಡುಪಿಯ ಯಾಮಿನಿ ಭಟ್, ಹಿರಿಯ ವಕೀಲರಾದ ಎಸ್. ಎನ್ ಹೆಬ್ಬಾರ್, ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರಿನ ಡಾ.ಎ.ವಿ.ಪ್ರಸನ್ನ, ಹಿರಿಯ ಸಾಹಿತಿ ಕಾಂತಾವರದ ಡಾ.ನಾ. ಮೊಗಸಾಲೆ, ಘಟಕದ ಕಾರ್ಯದರ್ಶಿ ದಕ್ಷಿಣಾಮೂರ್ತಿ, ಸತೀಶ್, ವಿಶ್ವೇಶ್ವರ ಅಡಿಗ ಮತ್ತಿತರರು ಉಪಸ್ಥಿತರಿದ್ದರು. ಸಮ್ಮೇಳನದ ಅಧ್ಯಕ್ಷರಾದ ಯಾಮಿನಿ ಭಟ್ ಅವರನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.
ಉಡುಪಿ ಜಿಲ್ಲಾ ಗಮಕ ಕಲಾ ಸಮ್ಮೇಳನದ ಉದ್ಘಾಟನೆ

ಉಡುಪಿ ಜಿಲ್ಲಾ ಗಮಕ ಕಲಾ ಸಮ್ಮೇಳನದ ಉದ್ಘಾಟನೆ
Date: