ಕಾರ್ಕಳ, ಮಾ.24: ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ – ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್-2024 ಪ್ರಥಮ ಹಂತದ ಪರೀಕ್ಷೆಯ ಫಲಿತಾಂಶದ ರಾಜ್ಯವಾರು ಟಾಪರ್ ಪಟ್ಟಿ ಬಿಡುಗಡೆಗೊಳಿಸಿದ್ದು, ಇದರಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೇದಾರ್ ರಮೇಶ್ ಕುಲಕರ್ಣಿ 99.9670351 ಪರ್ಸಂಟೈಲ್ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ರಮೇಶ್ ವಿ. ಕುಲಕರ್ಣಿ ಮತ್ತು ಗೀತಾ ಆರ್. ಕುಲಕರ್ಣಿಯವರ ಸುಪುತ್ರನಾಗಿರುತ್ತಾರೆ. ಕೇದಾರ್ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಪ್ರಕಟಗೊಂಡ ಜೆ.ಇ.ಇ. ಮೈನ್ ಬಿ.ಆರ್ಕ್- 2024 ರ ಫಲಿತಾಂಶದಲ್ಲಿ ಜ್ಞಾನಸುಧಾದದ 8 ವಿದ್ಯಾರ್ಥಿಗಳು 99 ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ ಜೆ.ಇ.ಇ. ಮೈನ್ ಬಿ.ಟೆಕ್‌ನಲ್ಲಿ 7 ಮಂದಿ 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳ ಬಹುದು. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಬಳಗವನ್ನು ಅಜೆಕಾರ್ ಪದ್ಮಗೊಪಾಲ್ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಸಿಹಿ ಹಂಚಿ ಸಂಭ್ರಮ: ಜೆಇಇ ಮೈನ್ – ಆರ್ಕಿಟೆಕ್ಚರ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೇದಾರ್ ರಮೇಶ್ ಕುಲಕರ್ಣಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಸಿಹಿ ಹಂಚಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಕಾಲೇಜು ಪ್ರಾಂಶುಪಾಲರಾದ ದಿನೇಶ್ ಎಂ.ಕೊಡವೂರ್, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಮಿಥುನ್ ಯು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.