Monday, January 20, 2025
Monday, January 20, 2025

ಪುರಾತತ್ವದೊಂದಿಗಿನ ಸಂಬಂಧ ಸರಣಿ ಕಾರ್ಯಕ್ರಮ

ಪುರಾತತ್ವದೊಂದಿಗಿನ ಸಂಬಂಧ ಸರಣಿ ಕಾರ್ಯಕ್ರಮ

Date:

ಉಡುಪಿ, ಮಾ.25: ಭಾವನಾ ಪ್ರತಿಷ್ಠಾನ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೊ ಆಯೋಜಿಸಿದ್ದ ಪುರಾತತ್ವದೊಂದಿಗಿನ ಸಂಬಂಧ ಸರಣಿ ಕಾರ್ಯಕ್ರಮವು (ಏನ್ಸಸ್ಟ್ರಲ್ ಅಫೇರ್ಸ್) ಉಡುಪಿ ಜಿಲ್ಲೆಯ ಪ್ರಾಗಿತಿಹಾಸಿಕ ನೆಲೆಗಳಾದ ಬುದ್ಧನಜಡ್ಡು ಹಾಗೂ ಅವಲಕ್ಕಿಪಾರೆಗಳಲ್ಲಿ ನಡೆಯಿತು. ನಮ್ಮ ನಡುವಿನ ಇತಿಹಾಸ, ಕಲೆ ಹಾಗೂ ಸಂಸ್ಕೃತಿಯನ್ನು ಅರ್ಥೈಸಿಕೊಳ್ಳುವ ಈ ಸರಣಿ ಕಾರ್ಯಕ್ರಮದಲ್ಲಿ ಪುರಾತನ ಇತಿಹಾಸ ಕಾಲದ ನೆಲೆಗಳಲ್ಲಿನ ಗೀರು ರೇಖಾಚಿತ್ರಗಳು, ಸಂಬಂಧಿಸಿದ ಐತಿಹ್ಯಗಳ ಜೊತೆಗೆ ಐತಿಹಾಸಿಕ ಸ್ಥಳ ಹಾಗೂ ವಸ್ತುಗಳ ಅಧ್ಯಯನ ಮತ್ತು ದಾಖಲಾತಿಗಳನ್ನೊಳಗೊಂಡಿತ್ತು. ಸುಮಾರು ಕ್ರಿಸ್ತಪೂರ್ವ 6000 ವರ್ಷಗಳಿಂದ 3500 ವರ್ಷಗಳಷ್ಟು ಪುರಾತನವೆನಿಸಿರುವ ಈ ಗೀರು ಚಿತ್ರಗಳ ಬಗೆಗಿನ ಕಥೆಗಳು ಹಾಗೂ ಅದರ ಸುತ್ತಲಿನ ನಂಬಿಕೆಗಳೇ ಮುಂತಾಗಿ ಮಾಹಿತಿಯನ್ನು ಸ್ಥಳೀಯರಾದ ಇಂಜಿನಿಯರ್ ಮುರುಳೀಧರ ಹೆಗ್ಡೆಯವರು ವಿವರಿಸಿದರು.

ನಮ್ಮ ಕರಾವಳಿಯ ಭಾಗದ ಬಹು ಅಪರೂಪದ್ದೆನಿಸುವ ಈ ಚಿತ್ರಗಳ ಬಗೆಗೆ ಈ ಹಿಂದೆ ಶಿರ್ವ ಕಾಲೇಜಿನ ಪುರಾತತ್ವ ತಂಡವು ಅಧ್ಯಯನ ನಡೆಸಿತ್ತಲ್ಲದೇ ಜಾಗೃತಿ ಕಾರ್ಯಕ್ರಮ ಹಾಗೂ ಸೆಮಿನಾರ್ ನಡೆಸಿದ್ದ ಬಗೆಗೆ ಮಾಹಿತಿಯಿತ್ತರು. ಸಾಮಾನ್ಯವಾಗಿ ಈ ಚಿತ್ರಗಳಲ್ಲಿ ಕಾಣುವ ಅಭಿವ್ಯಕ್ತಿಗಳು ಭಾರತದ ಕೊಂಕಣ ಕರಾವಳಿಯ ಇತರೆಡೆಯಲ್ಲಿಯ ಚಿತ್ರಗಳಂತೆಯೇ ಇರುವುದಲ್ಲದೇ ಬೇಟೆಯ ಸನ್ನಿವೇಶಗಳು, ಮಾನವರ ಚಿತ್ರಗಳು, ಪ್ರಾಣಿ ಪಕ್ಷಿಗಳೇ ಮೊದಲಾಗಿ ಮರಗಿಡಗಳ ಸ್ಥೂಲ ರೂಪದ ಕಲ್ಪನೆಗಳ ಬಗೆಗೆ ಕಾರ್ಯಕ್ರಮದ ಸಂಯೋಜಕರಾದ ಕಲಾವಿದ ಡಾ. ಜನಾರ್ದನ ಹಾವಂಜೆಯವರು ಮಾಹಿತಿ ನೀಡಿದರು. ಈ ಚಿತ್ರಗಳ ಸಂರಕ್ಷಣೆ ಮತ್ತು ಇದರ ಸಮೀಪದ ಸ್ಥಳಗಳಲ್ಲಿಯ ಇನ್ನಷ್ಟು ಶೋಧ ಮತ್ತು ಪುರಾತನ ವಸ್ತುಗಳು ಕರಾವಳಿಯ ಪ್ರಾಗಿತಿಹಾಸದ ಅಧ್ಯಯನವನ್ನು ಮತ್ತಷ್ಟು ವಿಸ್ತರಿಸಬಹುದೆಂದರು. ಪ್ರಸ್ತುತ ಈ ಕಾರ್ಯಾಗಾರದಲ್ಲಿ ಕಲಾವಿದರು, ಛಾಯಾಗ್ರಾಹಕರು, ವಾಸ್ತುಶಿಲ್ಪ ಮತ್ತು ಇತಿಹಾಸದ ಅಧ್ಯಯನಾಸಕ್ತರು ಭಾಗವಹಿಸಿದ್ದರಲ್ಲದೇ ಇನ್ನು ಮುಂದೆಯೂ ಇನ್ನಷ್ಟು ಕರಾವಳಿ ಭಾಗದ ಪುರಾತನ ಕಟ್ಟಡಗಳು, ಇತಿಹಾಸ, ಕಲೆ ಮೊದಲಾದವುಗಳ ಬಗೆಗೆ ಅರಿವು ಮತ್ತು ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯನಿರ್ವಹಿಸುತ್ತದೆ ಎಂಬುದಾಗಿ ಸಂಯೋಜಕರು ವಿವರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಯು.ಬಿ.ಎನ್.ಡಿ., ಜ.20: ಇಸ್ರೇಲ್ ಬಂಧನದಲ್ಲಿದ್ದ 90 ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಯಿತು....
error: Content is protected !!