ಕೋಟ, ಮಾ.25: ಸ್ವಚ್ಛ ಭಾರತದ ಪರಿಕಲ್ಪನೆ ಪ್ರತಿಯೊಬ್ಬರಲ್ಲೂ ಮೂಡಬೇಕು, ಆ ಮೂಲಕವೇ ಜಾಗೃತ ಪರಿಸರ ನಿರ್ಮಾಣ ಸಾಧ್ಯ ಎಂದು ಕೋಟ ಗ್ರಾ.ಪಂ ಸದಸ್ಯ ಪೂರ್ವಾಧ್ಯಕ್ಷ ಅಜಿತ್ ದೇವಾಡಿಗ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರುಗಳ ಸಹಯೋಗದೊಂದಿಗೆ 201 ನೇ ಭಾನುವಾರದ ಪರಿಸರ ಸ್ನೇಹಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಮುಂದೆ ಬೆಲೆ ತೆರಬೇಕಾದೀತು ಎಂದರು. ಇದೇ ವೇಳೆ ಶೇವಧಿ ನಾಗರಾಜ್ ಗಾಣಿಗರ ಮೂಲಕ ಮಳೆಗಾಲದಲ್ಲಿ ನೆಟ್ಟ ಗಿಡಗಳಿಗೆ ನೀರುಣಿಸುವ ಕಾಯಕ ಹಾಗೂ ಕೋಟ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿ ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮ ನಡೆಯಿತು. ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ಸತ್ಯನಾರಾಯಣ ಆಚಾರ್, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.
ಸ್ವಚ್ಛ ಭಾರತ ಪರಿಕಲ್ಪನೆ ಪ್ರತಿಯೊಬ್ಬರಲ್ಲೂ ಮೂಡಬೇಕು: ಅಜಿತ್ ದೇವಾಡಿಗ
ಸ್ವಚ್ಛ ಭಾರತ ಪರಿಕಲ್ಪನೆ ಪ್ರತಿಯೊಬ್ಬರಲ್ಲೂ ಮೂಡಬೇಕು: ಅಜಿತ್ ದೇವಾಡಿಗ
Date: