ಉಡುಪಿ, ಮಾ.25: ಲೋಕಸಭೆ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಂಚೂಣಿ ಘಟಕಗಳ ಸಭೆ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಎಲ್ಲಾ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಿ ಪಕ್ಷದ ಅಭ್ಯರ್ಥಿಯನ್ನು ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸುವ ಪ್ರಯತ್ನ ಮಾಡಬೇಕು ಎಂದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಮಾತನಾಡಿ ಸರಕಾರದ ಯೋಜನೆಗಳನ್ನು ಮತದಾರರಿಗೆ ಮುಟ್ಟುವಂತೆ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮುಖಂಡರಾದ ಎಮ್.ಎ.ಗಪೂರ್, ಭಾಸ್ಕರ್ ರಾವ್ ಕಿದಿಯೂರು, ಮುರಳಿ ಶೆಟ್ಟಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳಾದ ಹರೀಶ್ ಕಿಣಿ, ಅಣ್ಣಯ್ಯ ಸೇರಿಗಾರ್, ಗೀತಾ ವಾಗ್ಳೆ, ಶಶಿಧರ್ ಶೆಟ್ಟಿ ಎಲ್ಲೂರು, ಕಿರಣ್ ಹೆಗ್ಡೆ, ಸರ್ಪುದ್ದಿನ್ ಶೇಕ್, ಜಯಕುಮಾರ್, ಜಯಕುಮಾರ್ ನಾಯಕ್, ಸೌರಭ್ ಬಲ್ಲಾಳ್, ದೀಪಕ್ ಕೋಟ್ಯಾನ್, ಕಿಶೋರ್ ಕುಮಾರ್ ಎರ್ಮಾಳ್, ವಿಶ್ವಾಸ್ ಅಮೀನ್, ಹರೀಶ್ ಶೆಟ್ಟಿ ಪಾಂಗಾಳ, ವೈ .ಬಿ. ರಾಘವೇಂದ್ರ, ಇಸ್ಮಾಯಿಲ್ ಆತ್ರಾಡಿ ಉಪಸ್ಥಿತರಿದ್ದರು. ಪ್ರ.ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಸ್ವಾಗತಿಸಿ ವಂದಿಸಿದರು.