Monday, November 25, 2024
Monday, November 25, 2024

ದಾರ್ಶನಿಕರ ಬದುಕಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಚರಣೆ ಅರ್ಥಪೂರ್ಣ: ಜಿಲ್ಲಾಧಿಕಾರಿ

ದಾರ್ಶನಿಕರ ಬದುಕಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಚರಣೆ ಅರ್ಥಪೂರ್ಣ: ಜಿಲ್ಲಾಧಿಕಾರಿ

Date:

ಉಡುಪಿ, ಮಾ.25: ದಾರ್ಶನಿಕರು ಜಯಂತಿಗಳನ್ನು ಆಚರಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಅರಿತು, ದೈನಂದಿನ ಜೀವನದಲ್ಲಿ ನಾವು ಅಳವಡಿಸಿಕೊಂಡಾಗ ಮಾತ್ರ ಆಚರಣೆಗಳು ಅರ್ಥಪೂರ್ಣವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಮತ್ತು ಶ್ರೀ ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ದಾರ್ಶನಿಕರು ಹಾಗೂ ಮಹನೀಯರು ಸರಳ ಜೀವನ ನಡೆಸುವುದರೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗಳನ್ನು ಮಾಡುವುದರೊಂದಿಗೆ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ಇವರ ತತ್ವ, ಆದರ್ಶಗಳನ್ನು ತಿಳಿದುಕೊಳ್ಳುವುದರ ಜೊತೆಗೆ ತಮ್ಮ ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವುದು ಒಳಿತು ಎಂದರು. ಶರಣ ಸಂಸ್ಕೃತಿಯನ್ನು ವಿಶ್ವದೆಲ್ಲೆಡೆ ಪಸರಿಸಿದ ಮಹಾನ್ ವ್ಯಕ್ತಿ ರೇಣುಕಾಚಾರ್ಯರು. ಇವರು ಬೋಧಿಸಿರುವ ತತ್ವ ಸಿದ್ಧಾಂತಗಳು ಕೇವಲ ಬೋಧನೆಗೆ ಸೀಮಿತವಾಗಿರದೇ ಸಮಾಜವನ್ನು ತಿದ್ದುವ ಕೆಲಸ ಮಾಡಿವೆ. ಶರಣರ ವಚನಗಳು ಪ್ರತಿಯೊಬ್ಬರೂ ಮೇಲೂ ಪ್ರಭಾವ ಬೀರುವಂತದ್ದಾಗಿವೆ. ಸಣ್ಣ ವಚನಗಳ ಮೂಲಕ ಜನರು ಹೇಗೆ ಬದುಕಬೇಕೆಂಬ ಅನುಭವವನ್ನು ಸಾರಿದ್ದಾರೆ. ಇವು ಜೀವನ ರೂಪಿಸಿಕೊಳ್ಳುವುದಕ್ಕೆ ಸಹಕಾರಿಯಾಗಿವೆ ಎಂದರು. ಕೈವಾರ ತಾತತ್ಯ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ತನ್ನ ನಡವಳಿಕೆ ಹಾಗೂ ಆಧ್ಯಾತ್ಮಿಕ ಜೀವನ ಶೈಲಿಯ ಮೂಲಕ ಜನರ ಮೇಲೆ ಪರಿಣಾಮ ಬೀರಿದ್ದಾರೆ. ಹಲವಾರು ಪವಾಡಗಳನ್ನು ಮಾಡುತ್ತಾ, ಜನರಿಗೆ ತತ್ವಬೋಧನೆ ನೀಡುತ್ತಾ ಸಮಾಜ ಸುಧಾರಣೆಗೆ ಸಾಕಷ್ಟು ಕೀರ್ತನೆಗಳನ್ನು ರಚಿಸಿದ್ದಾರೆ ಎಂದ ಅವರು, ಕೈವಾರ ತಾತತ್ಯ ನವರ ಸಮಾಧಿ ಸ್ಥಳ ಕೈವಾರ ಇಂದು ಪ್ರಸಿದ್ಧ ಕ್ಷೇತ್ರವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗೆ ಮೂಲ ಕಾರಣ ಪ್ರತಿಯೊಬ್ಬರ ಮನಸ್ಸಿನಲ್ಲಿ ಹುಟ್ಟುವ ಮಾಯೆ. ಅದನ್ನು ಮೆಟ್ಟಿ ನಿಲ್ಲುವ ಚೈತನ್ಯ ನಮ್ಮಲ್ಲಿದ್ದಾಗ ಸನ್ಮಾರ್ಗದಿಂದ, ಪ್ರಾಮಾಣಿಕತೆಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು. ಶರಣ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿ. ಸಮಾಜದಲ್ಲಿದ್ದ ಜಾತಿ ತಾರತಮ್ಯ ಹೋಗಲಾಡಿಸಲು ಶಿವ ಶರಣರು ಅನೇಕ ವಚನಗಳನ್ನು ರಚಿಸಿದ್ದು, ಅವುಗಳು ಸರ್ವ ಕಾಲಕ್ಕೂ ಪ್ರಸ್ತುತ ಎಂದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಿರಂಜನ ಮಾತನಾಡಿ, ಕರ್ನಾಟಕ ರಾಜ್ಯ ದೊಡ್ಡ ಪ್ರಾಂತ್ಯವಾಗಿದ್ದು, ಇಲ್ಲಿ ನಡೆ-ನುಡಿ, ಉಡುಗೆ-ತೊಡುಗೆ ಹಾಗೂ ರೀತಿ-ನೀತಿಗಳು, ಸಂಪ್ರದಾಯಗಳು ಬೇರೆಯಾಗಿದ್ದರೂ, ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕುತ್ತಿದ್ದಾರೆ. ಶರಣ ಹಾಗೂ ಸಂತರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ತಿಳಿಸುವ ಹಾಗೂ ತಲುಪಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ತಾಲೂಕು ತಹಶೀಲ್ದಾರ್‌ಗಳು, ಕ.ಸಾ.ಪ ಕಾರ್ಯದರ್ಶಿ ನರಸಿಂಹಮೂರ್ತಿ, ಶರಣ ಸಾಹಿತ್ಯ ಪರಿಷತ್ತಿನ ಗಿರೀಶ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!