Wednesday, January 22, 2025
Wednesday, January 22, 2025

ತೆಂಕನಿಡಿಯೂರು ಕಾಲೇಜು: ಸಾಮಾಜಿಕ ಉದ್ಯಮಶೀಲತೆ ಕಾರ್ಯಗಾರ

ತೆಂಕನಿಡಿಯೂರು ಕಾಲೇಜು: ಸಾಮಾಜಿಕ ಉದ್ಯಮಶೀಲತೆ ಕಾರ್ಯಗಾರ

Date:

ತೆಂಕನಿಡಿಯೂರು, ಮಾ.26: ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಮಸ್ಯೆಗಳಿಗೆ ಸಾಮಾಜಿಕ ಉದ್ಯಮಶೀಲತೆ ಒಂದು ಅದ್ಭುತ ವೇದಿಕೆ. ವ್ಯವಹಾರ ಅಧ್ಯಯನ ಮತ್ತು ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಸಾಮಾಜಿಕ ಉದ್ಯಮದ ಗುರಿ, ಆಳ ಅಗಲವನ್ನು ಅರಿತಲ್ಲಿ, ಆರ್ಥಿಕ ಲಾಭದೊಂದಿಗೆ ಸಾಮಾಜಿಕ ಸೇವೆಯನ್ನು ಸಹ ಒದಗಿಸಲು ಇದು ಅತ್ಯಂತ ಪರಿಣಾಮಕಾರಿ ಯಾಗಲಿದೆ ಎಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರೋಷನಿ ಯಶವಂತ್ ಹೇಳಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಐಕ್ಯೂ ಎಸಿ ಮತ್ತು ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನಶಾಸ್ತ್ರ ವಿಭಾಗ ಆಯೋಜಿಸಿದ ಸಾಮಾಜಿಕ ಉದ್ಯಮ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಬಿಂದು ಟಿ., ವ್ಯವಹಾರ ಅಧ್ಯಯನಶಾಸ್ತ್ರ ಮುಖ್ಯಸ್ಥರಾದ ಡಾ. ರಘು ನಾಯ್ಕ, ಸಹಪ್ರಾಧ್ಯಾಪಕರಾದ ಉಮೇಶ್ ಪೈ, ಸಹಾಯಕ ಪ್ರಾಧ್ಯಾಪಕರಾದ ಡಾ. ಗೀತಾ ಎನ್., ದಿನೇಶ್ ಎಂ. ಉಪನ್ಯಾಸಕರಾದ ಸ್ಮಿತಾ ಹೆಗಡೆ, ನಮಿತಾ ಹೆಗಡೆ, ವಿನಯಶ್ರೀ, ಧನ್ಯ, ಅರವಿಂದ ಭಟ್, ಉಪಸ್ಥಿತರಿದ್ದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಶ್ರೇಯಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸುಮಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ

ಉಡುಪಿ, ಜ.22: ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ...

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...
error: Content is protected !!