Thursday, January 23, 2025
Thursday, January 23, 2025

ಸಂಸ್ಕೃತಿ ವಿಶ್ವ ಪ್ರತಿಷ್ಠಾನ: ವಿಶ್ವ ರಂಗಭೂಮಿ ದಿನಾಚರಣೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ: ವಿಶ್ವ ರಂಗಭೂಮಿ ದಿನಾಚರಣೆ

Date:

ಉಡುಪಿ, ಮಾ.26: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಮಂಗಳವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳಾದ ಪ್ರೊ.ಆರ್. ಎಲ್. ಭಟ್ ಉಡುಪಿ (ನಾಟಕ ಸಾಹಿತ್ಯ), ಕೆ. ವಿ. ರಾಘವೇಂದ್ರ ಐತಾಳ್, ಮುಂಬೈ (ರಂಗ ನಿರ್ದೇಶಕರು), ಕಜೆ ರಾಮಚಂದ್ರ ಭಟ್ (ರಂಗ ಸಂಘಟಕರು), ಎಸ್. ವಿ. ರಮೇಶ್ ಬೇಗಾರ್ (ರಂಗ ಸಂಘಟಕರು ಹಾಗೂ ನಿರ್ದೇಶಕರು), ಸುಜಾತ ಶೆಟ್ಟಿ (ರಂಗ ನಟಿ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ-2024′ ಪ್ರದಾನ ಮಾಡಲಾಯಿತು.

ಸಭಾಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿ ವರದರಾಯ ಪೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಲಾ ಪೋಷಕರಾದ ವಿ.ಜಿ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್ ಹಾಗೂ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮುಖ್ಯಸ್ಥರಾದ ಪುರಂದರ ತಿಂಗಳಾಯ ಉಪಸ್ಥಿತರಿದ್ದರು.

ಸಂಚಾಲಕ ರವಿರಾಜ್ ಎಚ್ ಪಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸ್ಕೃತರ ಪರಿಚಯವನ್ನು ರಾಘವೇಂದ್ರ ಪ್ರಭು ಕರ್ವಾಲು, ರಂಜಿನಿ ವಸಂತ್, ಪದ್ಮಾಸಿನಿ ಉದ್ಯಾವರ, ವಿದ್ಯಾ ಸರಸ್ವತಿ ಹಾಗೂ ವಿದ್ಯಾ ಶಾಮಸುಂದರ್ ವಾಚಿಸಿದರು. ಹಾಸ್ಯ ಭಾಷಣಗಾರ್ತಿ ಸಂಧ್ಯಾ ಶೆಣೈ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಗಾಯಕಿ ಅಖಿಲ ಹೆಗಡೆ ಹೊನ್ನಾವರ ಇವರಿಂದ ರಂಗಗೀತೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!