Home ಸುದ್ಧಿಗಳು ಪ್ರಾದೇಶಿಕ ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ

192
0

ಉಡುಪಿ, ಮಾ.28: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ಹಾಗೂ ನಾಯಕರ ಸಮ್ಮುಖದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವು‌ ಉದ್ಘಾಟನೆಗೊಂಡಿತು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಏ ಗಫೂರ್, ಕೆ.ಪಿ.ಸಿ.ಸಿ ವಕ್ತಾರರಾದ ಸುಧೀರ್ ಕುಮಾರ್ ಮುರೋಳ್ಳಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಘ್ಲೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ದಿನೇಶ್ ಪುತ್ರನ್, ಉಡುಪಿ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೈ ಸುಕುಮಾರ್, ನಾಯಕರಾದ ಪ್ರಸಾದ್‌ರಾಜ್ ಕಾಂಚನ್, ಮುರಳಿ ಶೆಟ್ಟಿ, ದಿವಾಕರ್ ಕುಂದರ್, ದೀಪಕ್ ಕೋಟ್ಯಾನ್, ಕಿರಣ್ ಹೆಗ್ಡೆ, ಹರೀಶ್ ಕಿಣಿ, ಸೌರಭ್ ಬಲ್ಲಾಳ್, ಪ್ರಖ್ಯಾತ್ ಶೆಟ್ಟಿ, ಶೇಖ್ ವಾಹೀದ್, ಮಾರ್ಕ್ ಸಲ್ದಾಹ್ನ, ಮಮತಾ ಶೆಟ್ಟಿ, ಪ್ರಶಾಂತ್ ಪೂಜಾರಿ, ರೋಶನ್ ಶೆಟ್ಟಿ, ಗಣೇಶ್ ನೆರ್ಗಿ, ರವಿರಾಜ್ ರಾವ್, ಸುರೇಶ್ ಶೆಟ್ಟಿ ಬನ್ನಂಜೆ, ಸುರಜ್ ಕರ್ಕೇರ, ಪ್ರವೀಣ್ ಜಿ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಕುಶಲ್ ಶೆಟ್ಟಿ, ನರಸಿಂಹಮೂರ್ತಿ, ನಾಸಿರ್ ಯಾಕೂಬ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭಾ ಸದಸ್ಯರು, ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು‌.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಸ್ವಾಗತಿಸಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.