Sunday, January 19, 2025
Sunday, January 19, 2025

ಗೋಮಾಳಗಳ ರಕ್ಷಣೆಯಾಗಬೇಕು: ಗೋ ಹಿತರಕ್ಷಣಾ ಒಕ್ಕೂಟ ಉಡುಪಿ ಮನವಿ

ಗೋಮಾಳಗಳ ರಕ್ಷಣೆಯಾಗಬೇಕು: ಗೋ ಹಿತರಕ್ಷಣಾ ಒಕ್ಕೂಟ ಉಡುಪಿ ಮನವಿ

Date:

ಉಡುಪಿ: ಬಿಟ್ರಿಷ್ ಕಾಲದಿಂದಲೂ ಗ್ರಾಮೀಣ ಪ್ರದೇಶವೂ ಸೇರಿದಂತೆ ಎಲ್ಲಾ ಕಡೆಯಲ್ಲಿರುವ ಗೋಮಾಳದ ಭೂಮಿಯನ್ನು ಜಾನುವಾರುಗಳ ಮೇವು, ಪಾಲನೆಗೆ ಮೀಸಲಿಡಬೇಕು. ಇದಕ್ಕಾಗಿ ಪ್ರತಿ ಗ್ರಾಮಗಳಲ್ಲಿರುವ ಗೋಮಾಳ ಜಾಗವನ್ನು ಜಿಲ್ಲಾಡಳಿತ ಗುರುತಿಸಿ ಕಾದಿರಿಸಬೇಕು ಎಂದು ಪೇಜಾವರ ಮಠಾಧೀಶರೂ, ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಶ್ರೀವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ. ಉಡುಪಿ ರಥಬೀದಿಯಲ್ಲಿರುವ ಪೇಜಾವರ ಮಠದಲ್ಲಿ ಮಾತನಾಡಿದ ಅವರು, ಗೋಸಂತತಿಯನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯ ಉಡುಪಿಯಿಂದಲೇ ಆರಂಭವಾಗಬೇಕೆಂಬ ಆಶಯದೊಂದಿಗೆ ನಾವೀ ಒತ್ತಾಯ ಮಾಡುತಿದ್ದೇವೆ ಎಂದರು.

ಜಿಲ್ಲೆಯ 233 ಗ್ರಾಮಗಳಲ್ಲಿ 3000 ಎಕರೆಯಷ್ಟು ಗೋಮಾಳದ ಭೂಮಿಗಳಿದ್ದು, ಅವುಗಳ ಗಡಿ ಗುರುತು ಮಾಡಬೇಕು. ಗೋಮಾಳಗಳನ್ನು ಕೇವಲ ಗೋವುಗಳಿಗಾಗಿ ಮೀಸಲಿಟ್ಟು, ಅವುಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ಗ್ರಾಮಗಳಲ್ಲಿರುವ ಗೋಮಾಳದ ಜಮೀನನ್ನು ಆಯಾ ಗ್ರಾಮದ ಗೋವುಗಳ ಪಾಲನೆ ಗೆ ಮಾತ್ರ ಒದಗಿಸಬೇಕು. ಈ ಬಗ್ಗೆ ಸರಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು ಎಂದು ಗೋ ಹಿತರಕ್ಷಣಾ ಒಕ್ಕೂಟದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಂತರ ಗೋ ಹಿತರಕ್ಷಣಾ ಒಕ್ಕೂಟದ ಗೌರವಾಧ್ಯಕ್ಷರಾದ ಸ್ವಾಮೀಜಿಯವರ ಮಾರ್ಗದರ್ಶನದಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಉಡುಪಿ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿರುವ ಗೋಮಾಳದ ಜಾಗದ ಗಡಿ ಗುರುತಿಸಿ ಹದ್ದುಬಸ್ತು ಮಾಡಿಕೊಡುವಂತೆ ಸ್ಥಳೀಯಾಡಳಿತಕ್ಕೆ ಸೂಚಿಸುವಂತೆ ಮನವಿ ನೀಡಲಾಯಿತು.

ಗೋ ಹಿತರಕ್ಷಣಾ ಒಕ್ಕೂಟ ಉಡುಪಿ ಜಿಲ್ಲಾ ಸಂಚಾಲಕ ಗಣೇಶ್ ಕಿಣಿ ಬೆಳ್ವೆ, ಕಾರ್ಯದರ್ಶಿ ವಿಜಯ್ ಪ್ರಕಾಶ್ ಬೈಲಕೆರೆ, ಶ್ರೀನಿವಾಸ್ ಶೆಟ್ಟಿಗಾರ್ ಬಾರ್ಕೂರು, ಡಾ. ಅಣ್ಣಯ್ಯ ಕುಲಾಲ್, ಸೂರ್ಯನಾರಾಯಣ ಗಾಣಿಗ ಮಟಪಾಡಿ, ಕೃಷ್ಣಾನಂದ ಛಾತ್ರ, ದೇವದಾಸ್ ಹೆಬ್ಬಾರ್ ಕಟ್ಟಿಂಗೇರಿ, ಭಾಸ್ಕರ್ ಶೆಟ್ಟಿ ನಾವುಂದ, ಶ್ರೀಧರ ಆಚಾರ್ಯ ಕುಮ್ರಗೋಡು, ಶಶಾಂಕ್ ಶಿವತ್ತಾಯ, ವಿಶ್ವನಾಥ್ ನಾಯ್ಕ ನಡೂರು ಕಂಡಿಕೆ, ಚಂದ್ರಶೇಖರ ಹೆಗ್ಡೆ ಶಾನಾಡಿ, ಶಂಕರ್ ಹೆಗ್ಡೆ ಜನ್ನಾಡಿ, ಪ್ರೀತಮ ಎಸ್.ರೈ ಬಸ್ರೂರು, ರಾಮ ಮಡಿವಾಳ ಕುಂಬಾಶಿ, ಸುರೇಶ್ ಬೆಟ್ಟಿನ್ ಕೋಟೇಶ್ವರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!