Home ಸುದ್ಧಿಗಳು ಪ್ರಾದೇಶಿಕ ಬೇಸಿಗೆ ತರಬೇತಿ ಶಿಬಿರ: ಅರ್ಜಿ ಆಹ್ವಾನ

ಬೇಸಿಗೆ ತರಬೇತಿ ಶಿಬಿರ: ಅರ್ಜಿ ಆಹ್ವಾನ

139
0

ಉಡುಪಿ, ಮಾ.28: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1 ರಿಂದ 21 ರ ವರೆಗೆ ಹಾಗೂ ಏಪ್ರಿಲ್ 22 ರಿಂದ ಮೇ 12 ರ ವರೆಗೆ ಎರಡು ಹಂತದಲ್ಲಿ ಈಜು, ಶಟ್ಲ್ ಬ್ಯಾಡ್ಮಿಂಟನ್, ಲಾನ್ ಟೆನ್ನಿಸ್, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ ಬಾಲ್ ಕ್ರೀಡಾ ವಿಭಾಗದಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 9845432303, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.