Tuesday, January 21, 2025
Tuesday, January 21, 2025

ಮಕ್ಕಳ ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ

ಮಕ್ಕಳ ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ

Date:

ಉಡುಪಿ, ಮಾ.28: ಜಿಲ್ಲಾ ವ್ಯಾಪ್ತಿಯಲ್ಲಿರುವ 0-18 ವರ್ಷದೊಳಗಿನ ಪಾಲನೆ ಹಾಗೂ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಬಾಲನ್ಯಾಯ ಕಾಯ್ದೆ-2015ರಡಿ ನೋಂದಾವಣೆಗೊಂಡಿರಬೇಕು. ಯಾವುದೇ ಮಕ್ಕಳ ಪಾಲನಾ ಸಂಸ್ಥೆಗಳು, ಮಠಗಳು, ಮದ್ರಸಾ, ಚರ್ಚ್ಗಳಲ್ಲಿ ಮಕ್ಕಳನ್ನು ದಾಖಲಿಸಿ, ಮಕ್ಕಳ ಪಾಲನಾ ಸಂಸ್ಥೆಗಳನ್ನು ಸರ್ಕಾರದ ನೋಂದಣಿ ಇಲ್ಲದೇ ನಡೆಸುತ್ತಿದ್ದಲ್ಲಿ ಅವುಗಳನ್ನು ಏಪ್ರಿಲ್ 30 ರ ಒಳಗೆ ನೋಂದಾಯಿಸಿಕೊಳ್ಳಬೇಕು. ಅನಾಥ, ಪರಿತ್ಯಕ್ತ, ಪಾಲನೆ, ಪೋಷಣೆ ಹಾಗೂ ರಕ್ಷಣೆಗೆ ಅಗತ್ಯವಿರುವ ಮಕ್ಕಳನ್ನು ಹೊಂದಿದ್ದು, ಔಪಚಾರಿಕ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳನ್ನು ಹೊಂದಿರದೇ ಬಾಲನ್ಯಾಯ ಕಾಯ್ದೆ 2015 ರಡಿ ನೋಂದಾಯಿಸದೇ ಕಾರ್ಯನಿರ್ವಹಿಸುತ್ತಿದ್ದರೆ ಅವರ ವಿರುದ್ಧ ಬಾಲನ್ಯಾಯ ಕಾಯ್ದೆ 2015ರ ಸೆಕ್ಷನ್ 33, 34, 41, 42 ಮತ್ತು 75 ರಡಿ ಕಾನೂನು ಕ್ರಮ ಜರುಗಿಸಲಾಗುವುದು. ಹೊಸದಾಗಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವವರು ಬಾಲನ್ಯಾಯ ಕಾಯ್ದೆ 2015 ಕಲಂ 41ರನ್ವಯ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ ಬಿ ಬ್ಲಾಕ್, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ, ದೂರವಾಣಿ ಸಂಖ್ಯೆ: 0820-2574964 ಇ-ಮೇಲ್: [email protected] ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!