Wednesday, July 29, 2026
Wednesday, July 29, 2026

ಲೋಕಸಭಾ ಚುನಾವಣೆಯಲ್ಲಿ ಶೇಕಡವಾರು ಮತದಾನ ಹೆಚ್ಚಾಗುವಂತೆ ಜಾಗೃತಿ ಮೂಡಿಸಿ

ಲೋಕಸಭಾ ಚುನಾವಣೆಯಲ್ಲಿ ಶೇಕಡವಾರು ಮತದಾನ ಹೆಚ್ಚಾಗುವಂತೆ ಜಾಗೃತಿ ಮೂಡಿಸಿ

Date:

ಉಡುಪಿ, ಏ.3: 2024 ರ ಲೋಕಸಭಾ ಚುನಾವಣೆಯಲ್ಲಿ ಕಳೆದ ಲೋಕಸಭಾ ಚುನಾವಣೆಗಿಂತ ಶೇಕಡಾವರು ಹೆಚ್ಚಿನ ಮತದಾನವಾಗುವಂತೆ ಪ್ರೋತ್ಸಾಹಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮತದಾನವನ್ನು ಹೆಚ್ಚಿಸಬೇಕು ಎಂದು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ. ಎಸ್ ವಸ್ತ್ರದ್ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2019 ರ ಲೋಕಸಭಾ ಚುನಾವಣೆಗಿಂತ ಶೇಕಡವಾರು ಮತದಾನ ಹೆಚ್ಚಿಸಲು ಹಲವಾರು ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸಲು ವಿಶೇಷ ಕಾಳಜಿ ವಹಿಸಬೇಕು. ಕಡಿಮೆ ಮತದಾನವಾದ ಕೇಂದ್ರಗಳಲ್ಲಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು. ಪಾರದರ್ಶಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಮಾಹಿತಿ, ಸಹಾಯವಾಣಿ ಹಾಗೂ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚುನಾವಣಾ ಆಪ್‌ಗಳಾದ ವಿ.ಹೆಚ್.ಎ, ಸಕ್ಷಮ್, ಸುವಿಧಾ, ಸಿ-ವಿಜಿಲ್ ಮತ್ತು 1950 ಸಹಾಯವಾಣಿ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ವಿಶೇಷವಾಗಿ ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಅವರಿಗೆ ಮತದಾರರ ಸಾಕ್ಷರತೆಯ ಅರಿವು ಮೂಡಿಸುವುದರ ಜೊತೆಗೆ ಮತದಾನ ಮಾಡಲು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಖೀ ಮತಗಟ್ಟೆಗಳು ಆಕರ್ಷಣೀಯವಾಗಿ ಇರುವಂತೆ ಮಾಡಬೇಕು ಎಂದರು. ಮತದಾನ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳ ಕುರಿತು ವಿಶೇಷ ಗಮನ ಹರಿಸಿ ಸಾರ್ವಜನಿಕರಿಗೆ, ವಿಶೇಷ ಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದ ಅವರು, ಶ್ರವಣ ದೋಷವುಳ್ಳವರಿಗೆ ವಿಶೇಷ ಸಂಜ್ಞೆ ತಜ್ಞರ ಮೂಲಕ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು. ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅವರು, ಜಿಲ್ಲೆಯಲ್ಲಿ ಅನುಷ್ಠಾನ ಗೊಳಿಸುತ್ತಿರುವ ಚುನಾವಣಾ ಜಾಗೃತಿ ಸ್ವೀಪ್ ಚಟುವಟಿಕೆಗಳು ಹಾಗೂ ಕಡಿಮೆ ಮತದಾನ ಕೇಂದ್ರಗಳಲ್ಲಿ ಶೇಕಡವಾರು ಮತದಾನ ಹೆಚ್ಚಿಸಲು ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರವಾದ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!