Monday, June 29, 2026
Monday, June 29, 2026

ಮತಗಟ್ಟೆ ಅಧಿಕಾರಿಗಳಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ

ಮತಗಟ್ಟೆ ಅಧಿಕಾರಿಗಳಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ

Date:

ಉಡುಪಿ, ಏ.4: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 119-ಕುಂದಾಪುರ, 120-ಉಡುಪಿ, 121- ಕಾಪು ಮತ್ತು 122-ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಅಗತ್ಯವಿರುವ ಮತಗಟ್ಟೆ ಅಧ್ಯಕ್ಷ ಅಧಿಕಾರಿಗಳಿಗೆ ಮತ್ತು ಸಹಾಯಕ ಅಧ್ಯಕ್ಷö ಅಧಿಕಾರಿಗಳಿಗೆ ಮಾರ್ಚ್ 22 ರಂದು ನೇಮಕಾತಿ ಆದೇಶದೊಂದಿಗೆ ಅಂಚೆ ಮತಪತ್ರ ಕೋರಿಕೆ ಅರ್ಜಿ ನಮೂನೆ-12 ಮತ್ತು ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಕೋರಿಕೆ ನಮೂನೆ -12 ಎ ಜಾರಿಮಾಡಲಾಗಿರುತ್ತದೆ. ಈ ನಮೂನೆಗಳನ್ನು ಸ್ವೀಕರಿಸದೇ ಇರುವ ಅಧಿಕಾರಿಗಳು ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಅಥವಾ ತಹಶೀಲ್ದಾರರ ಕಚೇರಿಗೆ ತೆರಳಿ ನಮೂನೆಗಳನ್ನು ಪಡೆಯಬಹುದಾಗಿದೆ. ಇದೇ ರೀತಿ ಇತರೆ ಮತಗಟ್ಟೆ ಅಧಿಕಾರಿಗಳಿಗೆ ನೇಮಕಾತಿ ಆದೇಶ ಜಾರಿ ಪ್ರಕ್ರಿಯೆ ಆರಂಭಗೊಂಡಿದ್ದು, ಒಂದು ವೇಳೆ ನಮೂನೆ 12 ಮತ್ತು 12 ಎ ಸ್ವೀಕರಿಸದೇ ಇದ್ದಲ್ಲಿ ಅವರು ಸಹ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಅಥವಾ ತಹಶೀಲ್ದಾರರ ಕಚೇರಿಗೆ ತೆರಳಿ ನಮೂನೆಗಳನ್ನು ಪಡೆಯಬಹುದಾಗಿದೆ.

ಪ್ರಸ್ತುತ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಮತದಾನ ದಿನದಂದು ಮತಗಟ್ಟೆ ಕರ್ತವ್ಯಕ್ಕಾಗಿ ನಿಯೋಜಿಸಿದ ಎಲ್ಲಾ ಮತಗಟ್ಟೆ ಅಧಿಕಾರಿಗಳು ಈ ಮೇಲೆ ಸೂಚಿಸಿದಂತೆ ಅಗತ್ಯತೆಗೆ ಅನುಸಾರವಾಗಿ ನಮೂನೆ 12 ಮತ್ತು 12 ಎ ಗಳನ್ನು ಪಡೆದು, ಏಪ್ರಿಲ್ 07 ರ ಒಳಗಾಗಿ ಭರಿಸಿದ ನಮೂನೆಗಳನ್ನು ಚುನಾವಣಾ ಗುರುತಿನ ಚೀಟಿ ನಕಲು ಪ್ರತಿ ಮತ್ತು ನೇಮಕಾತಿ ಆದೇಶದ ನಕಲು ಪ್ರತಿಯೊಂದಿಗೆ ಕೋರಿಕೆಯನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಎರಡನೇ ಹಂತದ ತರಬೇತಿ ವೇಳೆಯಲ್ಲಿ ಅಂಚೆ ಮತದಾನಕ್ಕೆ ಅರ್ಹರಿರುವ ಮತದಾರರಿಗೆ ತರಬೇತಿ ಕೇಂದ್ರಗಳಲ್ಲಿ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಿ ಅಂಚೆ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ: ಗುಜ್ಜಾಡಿ ಪ್ರಭಾಕರ್ ನಾಯಕ್

ಉಡುಪಿ, ಜೂ.29: ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲೆ...

ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಅಗತ್ಯ: ಎಂ.ಎನ್ ಮಧ್ಯಸ್ಥ

ಕೋಟ, ಜೂ.29: ಮುಂದಿನ ತಲೆಮಾರಿಗಾಗಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರೂ...

ಬ್ರಹ್ಮಾವರ: ಕೃಷಿ ಸಖಿಯರ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಸಂಪನ್ನ

ಬ್ರಹ್ಮಾವರ, ಜೂ.29: ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಕೃಷಿ ವಿಜ್ಞಾನ ಕೇಂದ್ರ...

ಎರ್ಮಾಳು ತೆಂಕ: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಭೆ

ಕಾಪು, ಜೂ.28: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತಾಗಿ...
error: Content is protected !!