Thursday, September 3, 2026
Thursday, September 3, 2026

ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Date:

ಉಡುಪಿ, ಏ.5: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಏಪ್ರಿಲ್ 7 ರವರೆಗೆ ಪೂರ್ವಾಹ್ನ 9 ರಿಂದ ಅಪರಾಹ್ನ 4 ರವರೆಗೆ ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮುನಿಯಾಲ್ ಆಯುರ್ವೇದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ., ಪಿ.ಜಿ. ಡೀನ್ ಮತ್ತು ದ್ರವ್ಯಗುಣ ವಿಭಾಗದ ಮುಖ್ಯಸ್ಥರಾದ ಡಾ.ಚಂದ್ರಕಾಂತ್ ಭಟ್, ರೋಗನಿಧಾನ ವಿಭಾಗದ ಮುಖ್ಯಸ್ಥರಾದ ಡಾ.ರವಿಶಂಕರ ಶೆಣೈ, ಆಸ್ಪತ್ರೆಯ ಮೇಲ್ವಿಚಾರಕ ಡಾ.ಪ್ರಮೋದ್ ಶೇಟ್, ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮಾಧವಿ ಇವರು ಉದ್ಘಾಟನೆ ನೆರವೇರಿಸಿದರು. ಸಂಸ್ಥೆಯ ಇತರ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಜೀರ್ಣ, ಹುಳಿ ತೇಗು, ಹೊಟ್ಟೆನೋವು, ಹೊಟ್ಟೆ ಉಬ್ಬರಿಸುವಿಕೆ, ವಾಕರಿಕೆ, ಎದೆಯುರಿ, ಹಸಿವಿಲ್ಲದಿರುವಿಕೆ ಮುಂತಾದ ಲಕ್ಷಣಗಳಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!