Thursday, September 3, 2026
Thursday, September 3, 2026

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರಗಳು ತಿರಸ್ಕೃತ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರಗಳು ತಿರಸ್ಕೃತ

Date:

ಉಡುಪಿ, ಏ.5: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. 13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡು, 10 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಘೋಷಿಸಿದರು. ಪಕ್ಷೇತರ ಅಭ್ಯರ್ಥಿಗಳಾದ ಕೆ.ಆರ್ ಕುಸುಮ, ರಾಜ್ ಬಲ್ಲಾಳ್ ಹಾಗೂ ಹೆಚ್ ಸುರೇಶ್ ಪೂಜಾರಿ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಸಚಿನ್ ಬಿ.ಕೆ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್ ಕಾಂಚನ್ ಹಾಗೂ ವಿಜಯಕುಮಾರ್ ಅವರ ನಾಮಪತ್ರಗಳು ಕ್ರಮಬದ್ಧವಾಗಿರುತ್ತವೆ. ಪರಿಶೀಲನಾ ಸಭೆಯಲ್ಲಿ ಚುನಾವಣಾ ವೀಕ್ಷಕ ಹಿತೇಶ್ ಕೆ. ಕೋಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!