Wednesday, January 22, 2025
Wednesday, January 22, 2025

ಡಾ.ಬಾಬು ಜಗಜೀವನರಾಂ ಜೀವನ ಮೌಲ್ಯಗಳು ಪ್ರತಿಯೊಬ್ಬರಿಗೂ ಆದರ್ಶ

ಡಾ.ಬಾಬು ಜಗಜೀವನರಾಂ ಜೀವನ ಮೌಲ್ಯಗಳು ಪ್ರತಿಯೊಬ್ಬರಿಗೂ ಆದರ್ಶ

Date:

ಉಡುಪಿ, ಏ.5: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಹೋರಾಟ ಹಾಗೂ ಜೀವನದ ಮೌಲ್ಯಗಳು ಪ್ರತಿಯೊಬ್ಬರಿಗೂ ಆದರ್ಶವಾಗಬೇಕು. ಇವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಇಂತಹ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಮಕಾಲೀನರಾದ ಡಾ.ಬಾಬು ಜಗಜೀವನರಾಂ ಅವರು, ಕೇಂದ್ರದಲ್ಲಿ ಬಹುತೇಕ ಎಲ್ಲಾ ಇಲಾಖೆಗಳ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾರ್ಮಿಕರ ಅಭಿವೃದ್ಧಿಗೆ ಅನೇಕ ಸುಧಾರಣೆಗಳನ್ನು ಮಾಡಿದ್ದಾರೆ. ಭಾರತದಲ್ಲಿ ಆಹಾರದ ಕೊರತೆ ಉಂಟಾದ ಸಂದರ್ಭದಲ್ಲಿ ಸುಧಾರಿತ ತಳಿಗಳು, ರಸಗೊಬ್ಬರಗಳನ್ನು ಬಳಸಿಕೊಳ್ಳುವುದರ ಮೂಲಕ ಆಹಾರ ಉತ್ಪಾದನೆಯನ್ನು ಹೆಚ್ಚಿಸಿ ಹಸಿರು ಕ್ರಾಂತಿಗೆ ಕೊಡುಗೆ ನೀಡಿದ್ದು, ನಾವು ಯಾವಾಗಲೂ ನೆನೆಯುವಂತಹ ಧೀಮಂತ ಚೇತನ ಡಾ.ಬಾಬು ಜಗಜೀವನರಾಂ ಅವರು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಂದಿಗೂ ಮರೆಯಲಾರದ ವ್ಯಕ್ತಿತ್ವ ಬಾಬು ಜಗಜೀವನ ರಾಂ ಅವರದ್ದು. ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದ ಇವರು, ಎಲ್ಲಾ ವರ್ಗದ ಜನಾಂಗದ ನಡುವೆ ಸಮಾನತೆ ತರಲು ಶ್ರಮಿಸಿದ್ದರು. ಡಾ.ಬಾಬು ಜಗಜೀವನರಾಂ ಅವರ ಜೀವನ ಸಿದ್ಧಾಂತಗಳನ್ನು ಪ್ರತಿನಿತ್ಯ ಪಾಲಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್ಪಿ ಸಿದ್ಧಲಿಂಗಪ್ಪ ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!