ತೆಂಕನಿಡಿಯೂರು, ಏ.6: ಭಾರತೀಯ ಪ್ರಜಾಪ್ರಭುತ್ವದಲ್ಲಿ ಯುವಜನತೆಯ ಪಾತ್ರ ಮಹತ್ತರದ್ದು. ನಮ್ಮ ಜವಾಬ್ದಾರಿ ನಿರ್ವಹಿಸುವುದರ ಜೊತೆಗೆ ಸಮಾಜವನ್ನು ಜಾಗೃತಗೊಳಿಸುವ ಹೊಣೆಗಾರಿಕೆಯೊಂದಿಗೆ ಚುನಾವಣಾ ಮತ್ತು ಮತದಾರರ ಜಾಗೃತಿ ಅವಶ್ಯಕ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಹೇಳಿದರು. ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಯೂತ್ ರೆಡ್ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಿದ ಮತದಾರರ ಸಾಕ್ಷರತಾ ಜಾಥ ಉದ್ಘಾಟಿಸಿ ಮಾತನಾಡಿದರು. ತೆಂಕನಿಡಿಯೂರು ಗ್ರಾಮ ಪಂಚಾಯತ್ ಪರಿಸರದಲ್ಲಿ ಮತದಾರರ ಜನ ಜಾಗ್ರತಿ ಜಾಥದೊಂದಿಗೆ ಮತದಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾಲೇಜಿನ ಐಕ್ಯೂಎಸ್ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ. ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ್, ಕಾರ್ಯದರ್ಶಿ ವಸಂತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ರೆಡ್ಕ್ರಾಸ್ ಘಟಕ ಸಂಚಾಲಕರಾದ ಪ್ರಶಾಂತ್ ನೀಲಾವರ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ರಘು ನಾಯ್ಕ, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಅರ್ಥಶಾಸ್ತ್ರ ಉಪನ್ಯಾಸಕರಾದ ಅಶೋಕ್, ಶಿವಯ್ಯ ಗೌಡ, ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳೊಂದಿಗೆ ಜಾಥದಲ್ಲಿ ಭಾಗವಹಿಸಿದ್ದರು.