Monday, January 20, 2025
Monday, January 20, 2025

ಕೆ.ಎಂ.ಸಿ ಮಣಿಪಾಲ: ವಿಶ್ವ ಆರೋಗ್ಯ ದಿನಾಚರಣೆ

ಕೆ.ಎಂ.ಸಿ ಮಣಿಪಾಲ: ವಿಶ್ವ ಆರೋಗ್ಯ ದಿನಾಚರಣೆ

Date:

ಮಣಿಪಾಲ, ಏಪ್ರಿಲ್ 8: ಪ್ರತಿ ವರ್ಷ ಏಪ್ರಿಲ್ 7 ಅನ್ನು ವಿಶ್ವದಾದ್ಯಂತ ವಿಶ್ವ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಉತ್ತಮ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. 2024 ರ ಧ್ಯೇಯ ವಾಕ್ಯ ‘ನನ್ನ ಆರೋಗ್ಯ ನನ್ನ ಹಕ್ಕು’ ಇದು ಅಗತ್ಯ ಆರೋಗ್ಯ ಸೇವೆಗಳ ಪ್ರವೇಶದ ಸವಲತ್ತು ಎಂದು ಪರಿಗಣಿಸದೆ. ಮೂಲಭೂತ ಮಾನವ ಹಕ್ಕು ಎಂದು ಪರಿಗಣಿಸಬೇಕಾದ ಅಗತ್ಯವನ್ನು ಒತ್ತಿ ಹೇಳುತ್ತದೆ. ಇದರ ಚಟುವಟಿಕೆಗಳ ಭಾಗವಾಗಿ ಕಸ್ತೂರ್ಬಾ ಆಸ್ಪತ್ರೆಯ ಶುಶ್ರೂಷಾ ತಂಡವು ಸಮುದಾಯವನ್ನು ಆರೋಗ್ಯ ಚಟುವಟಿಕೆಗಳಳ್ಳಿ ತೊಡಗಿಸಿಕೊಳ್ಳುವ ಉತ್ಕಟ ಸಂಕಲ್ಪದೊಂದಿಗೆ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ಬೀದಿ ನಾಟಕಗಳ ಮೂಲಕ, ಪ್ರೇಕ್ಷಕರನ್ನು ಆಕರ್ಷಿಸಿತು, ಉತ್ತಮ ಆರೋಗ್ಯದ ಅರಿವು ಮತ್ತು ರೋಗ ತಡೆಗಟ್ಟುವಿಕೆ ಕುರಿತು ಪ್ರಮುಖ ಸಂದೇಶಗಳನ್ನು ನೀಡಿತು. ಅಲ್ಲದೇ ಆಸ್ಪತ್ರೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಎಲ್ಲಾ ವರ್ಗದ ವ್ಯಕ್ತಿಗಳಿಗೆ ಆರೋಗ್ಯ ಸೇವೆ ನೀಡುವ ಬದ್ಧತೆಗೆ ಸಾಕ್ಷಿಯಾಯಿತು. ಈ ಉಪಕ್ರಮವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಆರೋಗ್ಯ ರಕ್ಷಣೆ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕಾಗಿದೆ ಎಂದು ಖಚಿತಪಡಿಸಿಕೊಳ್ಳುವ ಅಚಲ ಬದ್ಧತೆಯನ್ನು ಒತ್ತಿ ಹೇಳಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಅವರು, ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು ಆದರೆ ಈಗ ಅಸಾಂಕ್ರಾಮಿಕ ಮತ್ತು ಜೀವನಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ, ಕ್ಯಾನ್ಸರ್ ಇತ್ಯಾದಿಗಳ ತಡೆಗಟ್ಟುವ ಕುರಿತು ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದರು. ಶುಶ್ರೂಷಾ ತಂಡ, ಆರೋಗ್ಯ ವೃತ್ತಿಪರರು ಮತ್ತು ಸ್ವಯಂಸೇವಕರು ಸಹಕರಿಸಿದರು. ಸುಮಾರು 1000 ಕ್ಕೂ ಹೆಚ್ಚು ಜನರು ಕಾರ್ಯಕ್ರಮದ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!