ಉಡುಪಿ, ಏ.12: ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುತ್ತದೆ. ಕೇಂದ್ರ ಸರ್ಕಾರವು ಬಾಲ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಅನ್ನು ಜಾರಿಗೆ ತಂದಿದ್ದು, ಸದರಿ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಹಾಗೂ 14-18 ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಮತ್ತು ಪ್ರಚಾರ ಚಟುವಟಿಕೆಗಳಲ್ಲಿ ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಾಲ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ತಪ್ಪಿದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016 ಅನ್ವಯ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳ ಬಳಕೆ ನಿಷೇಧ
ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳ ಬಳಕೆ ನಿಷೇಧ
Date: