ಮಣಿಪಾಲ, ಏ.12: ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯೋದಯ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವೈಭವಿ ಆಚಾರ್ಯ 600 ಕ್ಕೆ 597 ಅಂಕ ಪಡೆದಿದ್ದು, ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಸನ್ಮಾನಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಎಎಸ್‌ಪಿ ಸಿದ್ಧಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ, ಡಿಡಿಪಿಯು ಮಾರುತಿ, ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವೈಭವಿ ಆಚಾರ್ಯಗೆ ಜಿಲ್ಲಾಡಳಿತದಿಂದ ಸನ್ಮಾನ

ವೈಭವಿ ಆಚಾರ್ಯಗೆ ಜಿಲ್ಲಾಡಳಿತದಿಂದ ಸನ್ಮಾನ
Date: