Monday, January 20, 2025
Monday, January 20, 2025

ಮಣಿಪಾಲ: ಅಂಗದಾನದಿಂದ ಜೀವ ಉಳಿಸುವ ಉದಾತ್ತ ಪ್ರಯತ್ನ

ಮಣಿಪಾಲ: ಅಂಗದಾನದಿಂದ ಜೀವ ಉಳಿಸುವ ಉದಾತ್ತ ಪ್ರಯತ್ನ

Date:

ಮಣಿಪಾಲ, ಏ.13: ಉಡುಪಿ ಜಿಲ್ಲೆಯ ಕೆಮ್ಮಣ್ಣು ನಿವಾಸಿ 46 ವರ್ಷದ ಜೋ ವಿಕ್ಟರ್ ಲೂಯಿಸ್ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗಳ ನಂತರ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು. ಸಂಪೂರ್ಣ ವೈದ್ಯಕೀಯ ಚಿಕೆತ್ಸೆಯ ಹೊರತಾಗಿಯೂ ಲೂಯಿಸ್ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು. ಅವರ ಕುಟುಂಬವು ಅವರ ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ಧೈರ್ಯದ ನಿರ್ಧಾರವನ್ನು ತೆಗೆದುಕೊಂಡಿತು. ಆ ಮೂಲಕ ಅಗತ್ಯವಿರುವ ಇತರರಿಗೆ ಅಂಗ ದಾನ ಮಾಡಲು ನಿರ್ಧರಿಸಿತು.

ಜೀವಸಾರ್ಥಕಥೆ, ಸೊಟ್ಟೊ ಬೆಂಗಳೂರು ಇವರ ನಿಯಮಾವಳಿಗಳನ್ನು ಅನುಸರಿಸಿ, ಲೂಯಿಸ್ ಅವರ ಯಕೃತ್ತನ್ನು ಕೆಎಂಸಿ ಆಸ್ಪತ್ರೆ, ಅಂಬೇಡ್ಕರ್ ಸರ್ಕಲ್, ಮಂಗಳೂರು, ಒಂದು ಕಿಡ್ನಿಯನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿಯನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಕಳುಹಿಸಲಾಯಿತು. ಎರಡು ಕಾರ್ನಿಯಾಗಳನ್ನು ಮತ್ತು ಚರ್ಮವನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲು ಉಳಿಸಿಕೊಳ್ಳಲಾಯಿತು. ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಅಂಗಾಂಗ ದಾನದ ಕಾರ್ಯವು ಜೀವ ಉಳಿಸುವ ಉದಾತ್ತ ಪ್ರಯತ್ನವಾಗಿದೆ ಎಂದು ಶ್ಲಾಘಿಸಿ, ಇತರರು ಇಂತಹ ಪರಹಿತಚಿಂತನೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಿದರು. ಈ ಸಹಾನುಭೂತಿಯ ನಿರ್ಧಾರಕ್ಕಾಗಿ ಅವರು ಲೂಯಿಸ್ ಅವರ ಕುಟುಂಬಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!