Tuesday, January 21, 2025
Tuesday, January 21, 2025

ಶತಕೋಟಿ ಕೋವಿಡ್ ಲಸಿಕೆ ವಿತರಣೆ- ಉಡುಪಿಯಲ್ಲಿ ಸಂಭ್ರಮಾಚರಣೆ

ಶತಕೋಟಿ ಕೋವಿಡ್ ಲಸಿಕೆ ವಿತರಣೆ- ಉಡುಪಿಯಲ್ಲಿ ಸಂಭ್ರಮಾಚರಣೆ

Date:

ಉಡುಪಿ: ದೇಶದಲ್ಲಿ ಶತಕೋಟಿ ಲಸಿಕೆ ನೀಡಿದ ಸಾಧನೆ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ಡಿಹೆಚ್‌ಓ ಕಚೇರಿ ಆವರಣದಲ್ಲಿ ಆಗಸಕ್ಕೆ 100 ಬಲೂನುಗಳನ್ನು ಹಾರಿ ಬಿಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಕಾಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್, ದೇಶದಲ್ಲಿ ಮೊದಲ ಕೋವಿಡ್ ಲಸಿಕೆ ನೀಡಲು ಆರಂಭವಾದಾಗಿನಿಂದ, ಇಂದಿಗೆ 100 ಕೋಟಿ ಲಸಿಕೆ ನೀಡಲಾಗಿದೆ. ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆ ಮತ್ತು ಎಲ್ಲಾ ಇಲಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 9.15 ಲಕ್ಷ ಮಂದಿ ಮೊದಲ ಡೋಸ್ ಮತ್ತು 4.90 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಎರಡೂ ಡೋಸ್ ಲಸಿಕೆ ಪಡೆಯುವದರಿಂದ ಮಾತ್ರ ಕೋವಿಡ್ ನಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ. ಆದ್ದರಿಂದ ಮೊದಲ ಡೋಸ್ ಪಡೆದ ಎಲ್ಲರೂ 2 ನೇ ಡೋಸ್ ಪಡೆಯು ಮೂಲಕ ಕೋವಿಡ್ 3 ನೇ ಅಲೆಯಿಂದ ರಕ್ಷಿಸಿಕೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಮುಕ್ತ ಮಾಡಲು ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಕೋವಿಡ್ ಲಸಿಕಾ ಆಧಿಕಾರಿ ಡಾ. ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಾ. ಪ್ರೇಮಾನಂದ, ಡಾ. ಶ್ರೀರಾಮರಾವ್, ಡಾ. ಚಿದಾನಂದ ಸಂಜು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!